ಕೌಂಟಿ ಬಿಟ್ಟು ಐತಿಹಾಸಿಕ ಟೆಸ್ಟ್ ಆಡಿ: ಕೊಹ್ಲಿಗೆ ಖಡಕ್ ಸೂಚನೆ
Team Udayavani, Apr 28, 2018, 6:00 AM IST
ಹೊಸದಿಲ್ಲಿ: ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ. ಜೂ.14ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಫ್ಘಾನಿಸ್ಥಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ.
ಈ ಹಿಂದೆ ಭಾರತ ತಂಡದ ನಾಯಕ ಅಫ್ಘಾನ್ ವಿರುದ್ಧ ಟೆಸ್ಟ್ ಪಂದ್ಯವನ್ನು ಬಿಟ್ಟು ಇಂಗ್ಲೆಂಡ್ನಲ್ಲಿನ ಕೌಂಟಿ ಕ್ರಿಕೆಟ್ನಲ್ಲಿ ಆಡಲಿದ್ದಾರೆ ಎನ್ನಲಾಗಿತ್ತು. ಇಂಗ್ಲೆಂಡ್ ನೆಲದಲ್ಲಿ ನಡೆಯಲಿರುವ ಸರಣಿಗೂ ಮೊದಲು ಕೊಹ್ಲಿ ಅಲ್ಲಿನ ವಾತಾವರಣಕ್ಕೆ ಸರಿಯಾಗಿ ಹೊಂದಿಕೊಳ್ಳುವ ಬಗ್ಗೆ ಮಾತನಾಡಿದ್ದರು. ಹೀಗಾಗಿ ಸರಣಿಗೂ ಮೊದಲು ಕೌಂಟಿ ಕ್ರಿಕೆಟ್ ಆಡುವುದಾಗಿ ತಿಳಿಸಿದ್ದರು.
ಆದರೆ ಮೂಲಗಳ ಪ್ರಕಾರ ಸಿಒಎ (ಬಿಸಿಸಿಐ ಆಡಳಿತಾಧಿಕಾರಿಗಳ ಸಮಿತಿ) ಇದಕ್ಕೆ ಅನುಮತಿ ನೀಡಿಲ್ಲ ಎನ್ನಲಾಗಿದೆ. ಅಫ್ಘಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಐತಿಹಾಸಿಕ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಭಾಗವಹಿಸದಿದ್ದರೆ ಅದು ಕೂಟಕ್ಕೆ ಮಾಡಿದ ಅವಮಾನ. ಜತೆಗೆ ಪ್ರವಾಸಿ ತಂಡಕ್ಕೂ ಅಪಮಾನ ಮಾಡಿದ್ದಂತಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…