ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌: ಆಟ ಮುಗಿಸಿದ ಸೈನಾ, ಲಕ್ಷ್ಯ ಸೇನ್‌

Team Udayavani, Aug 25, 2022, 10:09 PM IST

1-sdsadas

ಟೋಕಿಯೊ: ಸ್ಟಾರ್‌ ಆಟಗಾರ್ತಿ ಪಿ.ವಿ. ಸಿಂಧು ಗೈರಲ್ಲಿ ಭಾರತದ ವನಿತಾ ವಿಭಾಗದ ಭರವಸೆಯಾಗಿದ್ದ ಸೈನಾ ನೆಹ್ವಾಲ್‌ “ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌’ ಪ್ರಿ-ಕ್ವಾರ್ಟರ್‌ ಫೈನಲ್‌ನಲ್ಲಿ ಪರಾಭವಗೊಂಡು ಕೂಟದಿಂದ ಹೊರಬಿದ್ದರು. ಹಾಗೆಯೇ ಪುರುಷರ ವಿಭಾಗದ ನೆಚ್ಚಿನ ಆಟಗಾರ ಲಕ್ಷ್ಯ ಸೇನ್‌ “ಆಲ್‌ ಇಂಡಿಯನ್‌’ ಪಂದ್ಯವೊಂದರಲ್ಲಿ ಎಚ್‌.ಎಸ್‌. ಪ್ರಣಯ್‌ ವಿರುದ್ಧ ಸೋತು ಹೋದರು.

ಥಾಯ್ಲೆಂಡ್‌ನ‌ ಬುಸನಾನ್‌ ಒಂಗ್ಬಾಮ್ರುಂಗಫ‌ನ್‌ ವಿರುದ್ಧ ಸೈನಾ 3 ಗೇಮ್‌ಗಳ ಹೋರಾಟ ನೀಡಿ ಶರಣಾದರು. ಅಂತರ 17-21, 21-16, 13-21. ಇದರೊಂದಿಗೆ ಸೈನಾ ವಿರುದ್ಧ ಥಾಯ್‌ ಆಟಗಾರ್ತಿಯ ಗೆಲುವಿನ ದಾಖಲೆ 5-3ಕ್ಕೆ ಏರಿತು.

ಆದರೆ ಭಾರತದ ಎರಡು ಪುರುಷರ ಜೋಡಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಶ್ರೇಯಾಂಕ ರಹಿತ ಜೋಡಿಯಾದ ಎಂ.ಆರ್‌. ಅರ್ಜುನ್‌-ಧ್ರುವ ಕಪಿಲ 58 ನಿಮಿಷಗಳ ಹೋರಾಟದ ಬಳಿಕ ಸಿಂಗಾಪುರದ ಟೆರ್ರಿ ಹೀ-ಲೋಹ್‌ ಕೀನ್‌ ಹೀನ್‌ ವಿರುದ್ಧ 18-21, 21-15, 21-16 ಅಂತರದ ಗೆಲುವು ಸಾಧಿಸಿದರು. ಕ್ವಾರ್ಟರ್‌ ಫೈನಲ್‌ನಲ್ಲಿ ಇವರು ಇಂಡೋನೇಷ್ಯಾದ ತೃತೀಯ ಶ್ರೇಯಾಂಕದ ಮೊಹಮ್ಮದ್‌ ಅಹಸಾನ್‌-ಹೆಂಡ್ರ ಸೆತಿಯವಾನ್‌ ವಿರುದ್ಧ ಆಡುವರು.

ಅನಂತರ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಸೇರಿಕೊಂಡು ಡೆನ್ಮಾರ್ಕ್‌ನ ಜೆಪ್ಪ ಬೇ-ಲಸ್ಸೆ ಮೊಹೆಡ್‌ ಜೋಡಿಯನ್ನು 21-12, 21-10 ನೇರ ಗೇಮ್‌ಗಳಿಂದ ಮಣಿಸಿದರು. ಇವರ ಮುಂದಿನ ಎದುರಾಳಿ ಜಪಾನ್‌ನ ಟಕುರೊ ಹೋಕಿ-ಯುಗೊ ಕೊಬಯಾಶಿ.

ಸೇನ್‌ ವಿರುದ್ಧ ಗೆದ್ದ ಪ್ರಣಯ್‌
“ಆಲ್‌ ಇಂಡಿಯನ್‌’ ಪಂದ್ಯವೊಂದರಲ್ಲಿ ನೆಚ್ಚಿನ ಆಟಗಾರ ಲಕ್ಷ್ಯ ಸೇನ್‌ ಅವ ರನ್ನು ಪರಾಭವಗೊಳಿಸಿದ ಎಚ್‌.ಎಸ್‌. ಪ್ರಣಯ್‌ ಕ್ವಾರ್ಟರ್‌ ಫೈನಲ್‌ ತಲುಪಿ ದರು. 3 ಗೇಮ್‌ಗಳ ಈ ಕಾಳಗದಲ್ಲಿ ಪ್ರಣಯ್‌ 17-21, 21-16, 21-17 ಅಂತರದ ಮೇಲುಗೈ ಸಾಧಿಸಿದರು. ಈ ಪಂದ್ಯಕ್ಕೂ ಮುನ್ನ ಇಬ್ಬರೂ 2-2 ಗೆಲುವಿನ ದಾಖಲೆ ಹೊಂದಿದ್ದರು. ಪ್ರಣಯ್‌ ಅವರಿನ್ನು ಚೀನದ ಜಾವೊ ಜುನ್‌ ಪೆಂಗ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.