ಚೀನ ಮಾಸ್ಟರ್ ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್ಗೆ ಲಕ್ಷ್ಯ ಸೇನ್
Team Udayavani, Mar 15, 2019, 12:30 AM IST
ಲಿಂಗ್ಶುಯಿ: ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ “ಚೀನ ಮಾಸ್ಟರ್’ ಬ್ಯಾಡ್ಮಿಂಟನ್ ಕೂಟದ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಈ ಕೂಟದ ಪುರುಷರ ವಿಭಾಗದಲ್ಲಿ ಸ್ಪರ್ಧಿಸುತ್ತಿರುವ ಭಾರತದ ಏಕೈಕ ಆಟಗಾರನಾಗಿರುವ ಲಕ್ಷ್ಯ ಸೇನ್, ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊರಿಯಾದ ಹಾ ಯಂಗ್ ವೊಂಗ್ ಅವರನ್ನು 21-14, 21-15 ಗೇಮ್ಗಳಿಂದ ಸೋಲಿಸಿದರು. ಕ್ವಾರ್ಟರ್ ಫೈನಲ್ನಲ್ಲಿ ಅವರು ಅತಿಥೇಯ ನಾಡಿನ ಝೂ ಜೆಖೀ ವಿರುದ್ಧ ಆಡಲಿದ್ದಾರೆ.