ಚೀನ ಓಪನ್ ಬ್ಯಾಡ್ಮಿಂಟನ್ ಹಿಂದೆ ಸರಿದ ಕೆ. ಶ್ರೀಕಾಂತ್
Team Udayavani, Nov 4, 2019, 11:28 PM IST
ಫುಜೂ (ಚೀನ): ಮಂಗಳವಾರದಿಂದ ಚೀನ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆರಂಭವಾಗಲಿದ್ದು, ಕೆ. ಶ್ರೀಕಾಂತ್ ಈ ಕೂಟದಿಂದ ಹಿಂದೆ ಸರಿದಿದ್ದಾರೆ. ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್ ಭಾರತದ ಪ್ರಮುಖ ಆಟಗಾರರಾಗಿದ್ದಾರೆ. ಆದರೆ ಇತ್ತೀಚಿನ ಟೂರ್ನಿಗಳಲ್ಲಿ ಇವರು ಬೇಗನೇ ಹೊರಬಿದ್ದಿರು ವುದರಿಂದ, ಹೆಚ್ಚಿನ ನಿರೀಕ್ಷೆ ಇರಿಸಿಕೊಳ್ಳಲು ಅಭಿಮಾನಿಗಳು ಹಿಂದೇಟು ಹಾಕುತ್ತಿದ್ದಾರೆ.
ಪುರುಷರ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಉತ್ತಮ ಪ್ರದರ್ಶನ ಮುಂದುವರಿಸುವ ವಿಶ್ವಾಸವಿದೆ. ಕಳೆದ ಫ್ರೆಂಚ್ ಓಪನ್ ಪಂದ್ಯಾವಳಿಯಲ್ಲಿ ಇವರು ರನ್ನರ್ ಅಪ್ ಆಗಿದ್ದರು.
ಸಿಂಧು ಮೊದಲ ಸುತ್ತಿನ ಪಂದ್ಯವನ್ನು ಜರ್ಮನಿಯ ವೋನ್ ಲೀ ವಿರುದ್ಧ ಆಡಲಿದ್ದಾರೆ. ಸೈನಾ ಅವರ ಎದುರಾಳಿ ಆತಿಥೇಯ ನಾಡಿನ ಕೈ ಯಾನ್ ಯಾನ್. ಗೆಲುವಿನ ಓಟ ಮುಂದುವರಿಸಿದರೆ ಸಿಂಧು ಕ್ವಾರ್ಟರ್ ಫೈನಲ್ನಲ್ಲಿ 3 ಬಾರಿಯ ವಿಶ್ವ ಚಾಂಪಿಯನ್ ಕ್ಯಾರೋಲಿನಾ ಮರಿನ್ ಅಥವಾ ವಿಶ್ವದ ನಂ.1 ಆಟಗಾರ್ತಿ ತೈ ಜು ಯಿಂಗ್ ಅವರನ್ನು ಎದುರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ