ಕೆಪಿಎಲ್ ಫಿಕ್ಸಿಂಗ್: ಗೋವಾ ತಂಡದಿಂದ ಹೊರಬಿದ್ದ ಸಿಎಂ ಗೌತಮ್

Team Udayavani, Nov 7, 2019, 5:14 PM IST

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ  ಸ್ಪಾಟ್ ಫಿಕ್ಸಿಂಗ್ ನಡೆಸಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಸಿ ಎಂ ಗೌತಮ್ ಅವರೊಂದಿಗಿನ ಗುತ್ತಿಗೆಯನ್ನು ಗೋವಾ ಕ್ರಿಕೆಟ್ ಮಂಡಳಿ ರದ್ದು ಮಾಡಿದೆ.

ಈ ವರ್ಷದ ಕೆಪಿಎಲ್ ಫೈನಲ್ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ನಡೆಸಲು ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿ ಎಂ ಗೌತಮ್ ಮತ್ತು ಸಹ ಆಟಗಾರ ಅಬ್ರಾರ್ ಖಾಜಿ ಬುಕ್ಕಿಗಳೊಡನೆ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ತನಿಖೆಯಿಂದ ಬಯಲಾಗಿತ್ತು. ಈ ಹಿನ್ನಲೆಯಲ್ಲಿ ಗುರುವಾರ ಬೆಳಗ್ಗೆ ಇಬ್ಬರು ಆಟಗಾರರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಸಿ ಎಂ ಗೌತಮ್ ಅವರು ಸದ್ಯ ಗೋವಾ ತಂಡದ ಪರವಾಗಿ ಆಡುತ್ತಿದ್ದಾರೆ. ಶುಕ್ರವಾರದಿಂದ ಆರಂಭವಾಗಲಿರುವ ಸೈಯದ್ ಮುಶ್ತಾಕ್ ಆಲಿ ಕೂಟಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. ಸದ್ಯ ಗೋವಾ ಕ್ರಿಕೆಟ್ ಅಸೋಸಿಯೇಶನ್ ದರ್ಶನ್ ಮಿಶೆಲ್ ಅವರನ್ನು ಹೊಸ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ