ಕೊರೊನಾ: ಮಹಿಳಾ ಹಾಕಿ ತಂಡದ ಚೀನ ಪ್ರವಾಸ ರದ್ದು
Team Udayavani, Feb 8, 2020, 5:12 AM IST
ಹೊಸದಿಲ್ಲಿ: ಒಲಿಂಪಿಕ್ಸ್ಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಭಾರತ ಮಹಿಳಾ ಹಾಕಿ ತಂಡ ಕೊರೊನಾ ಭೀತಿಯಿಂದಾಗಿ ತನ್ನ ಚೀನ ಪ್ರವಾಸವನ್ನು ರದ್ದು ಮಾಡಿದೆ. ಭಾರತೀಯ ಹಾಕಿ ಸಂಸ್ಥೆ ಶುಕ್ರವಾರ ಪ್ರಕಟನೆಯಲ್ಲಿ ಇದನ್ನು ತಿಳಿಸಿದೆ.
ವೇಳಾಪಟ್ಟಿ ಪ್ರಕಾರ ಮಾ. 14ರಿಂದ ಮಾ. 25ರ ತನಕ ಭಾರತ ಮಹಿಳಾ ತಂಡ ಚೀನದಲ್ಲಿ ಕೆಲವು ಪಂದ್ಯಗಳನ್ನು ಆಡಬೇಕಿತ್ತು. ಆದರೆ ಚೀನದಲ್ಲಿ 636 ಮಂದಿ ಮಾರಕ ವೈರಸ್ಗೆ ಬಲಿಯಾಗಿದ್ದಾರೆ. 31 ಸಾವಿರಕ್ಕೂ ಅಧಿಕ ಮಂದಿಗೆ ರೋಗ ಹರಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಚೀನ ಸರಕಾರ ಹೇಳಿಕೊಂಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚೀನಕ್ಕೆ ಭಾರತೀಯ ಹಾಕಿ ತಂಡವನ್ನು ಕಳುಹಿಸದಿರಲು ನಿರ್ಧರಿಸಲಾಗಿದೆ.
ಒಲಿಂಪಿಕ್ಸ್ಗೆ ಕೆಲವು ತಿಂಗಳು ಮಾತ್ರ ಉಳಿದಿದೆ. ಇಂತಹ ಸಂದರ್ಭ ದಲ್ಲಿ ವಿಶ್ವದ ಅಗ್ರ ತಂಡಗಳೊಂದಿಗೆ ಸೆಣಸಿ ಆತ್ಮವಿಶ್ವಾಸ ಹೆಚ್ಚಿಸುವ ಅಗತ್ಯವಿದೆ ಎಂದು ನಾಯಕಿ ರಾಣಿ ರಾಮ್ಪಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!