ಭೀಕರ ಕಾರು ಅಪಘಾತದಲ್ಲಿ ಮಾಜಿ ಅಂಪೈರ್ ರೂಡಿ ಕೊರ್ಜೆನ್ ವಿಧಿವಶ: ಕಂಬನಿ ಮಿಡಿದ ಸೆಹವಾಗ್

Team Udayavani, Aug 9, 2022, 5:40 PM IST

Cricket Umpire Rudi Koertzen expires in Car Crash

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟ್ ಅಂಪೈರ್ ರೂಡಿ ಕೊರ್ಜೆನ್ ಅವರು ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ವಿಶ್ವ ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಮುಖಗಳಲ್ಲಿ ಒಬ್ಬರಾಗಿದ್ದ ರೂಡಿ ಕೊರ್ಜೆನ್ ಅವರ ನಿಧನದ ಸುದ್ದಿಯನ್ನು ಪುತ್ರ ಖಚಿತ ಪಡಿಸಿದ್ದಾರೆ.

ನೆಲ್ಸನ್ ಮಂಡೇಲಾ ಬೇ ಡೆಸ್ಪಾಚ್ ನಿವಾಸಿ 73 ವರ್ಷದ ಕೊರ್ಜೆನ್ ಅವರು ಗಾಲ್ಫ್ ಆಟದ ನಂತರ ಕೇಪ್ ಟೌನ್‌ನಿಂದ ಮನೆಗೆ ಹಿಂದಿರುಗುತ್ತಿದ್ದರು. ಅವರು ಸೋಮವಾರವೇ ಹಿಂದೆ ಬರಬೇಕಿತ್ತು. ಆದರೆ ಮತ್ತಷ್ಟು ಆಟ ಆಡಿದ್ದರಿಂದ ಮಂಗಳವಾರ ಬೆಳಗ್ಗೆ ಮರಳಿದರು. ಈ ವೇಳೆ ಕಾರು ಅಪಘಾತವಾಗಿದೆ. ರೂಡಿ ಜೊತೆಗೆ ಕಾರಿನಲ್ಲಿದ್ದ ಮೂವರು ಸ್ನೇಹಿತರು ಕೂಡಾ ನಿಧನರಾಗಿದ್ದಾರೆ ಎಂದು ವರದಿ ಹೇಳಿದೆ.

ದಕ್ಷಿಣ ಆಫ್ರಿಕಾದ ರೈಲ್ವೇಯಲ್ಲಿ ಕ್ಲರ್ಕ್ ಆಗಿದ್ದ ರೂಡಿ ಕೊರ್ಜೆನ್ ಅವರು ಆ ಸಮಯದಲ್ಲಿ ಕ್ಲಬ್ ಕ್ರಿಕೆಟ್ ಆಡುತ್ತಿದ್ದರು. 1981ರಲ್ಲಿ ಕ್ರಿಕೆಟ್ ಅಂಪೈರಿಂಗ್ ಆರಂಭಿಸಿದ ರೂಡಿ ಕೊರ್ಜೆನ್ ಅವರು ಇದಾಗಿ 11 ವರ್ಷಗಳ ಬಳಿಕ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಅಂಪೈರಿಂಗ್ ಗೆ ಪದಾರ್ಪಣೆ ಮಾಡಿದರು.

ಇದನ್ನೂ ಓದಿ:ದೊಡ್ಡಲಾಲಸಾಬವಲಿ ದರ್ಗಾದಲ್ಲಿ ಅಜ್ಜನವರ ಮೊಹರಂ: ನೀರಿನಿಂದ ದೀಪ ಹಚ್ಚುವುದು ಇಲ್ಲಿನ ವಿಶೇಷ

ರೂಡಿ ಕೊರ್ಜೆನ್ ಅವರು 209 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮತ್ತು 14 ಟಿ20 ಪಂದ್ಯಗಳಿಗೆ ಅಂಪೈರಿಂಗ್ ನಡೆಸಿದ್ದಾರೆ. ಒಟ್ಟು 331 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರಿಂಗ್ ನಡೆಸಿದ ರೂಡಿ ಕೊರ್ಜೆನ್ ಅವರು 2010ರಲ್ಲಿ ವಿದಾಯ ಹೇಳಿದರು.

ಸೆಹವಾಗ್ ಕಂಬನಿ: ರೂಡಿ ಕೊರ್ಜೆನ್ ನಿಧನದ ಸುದ್ದಿ ಕೇಳಿ ಮಾಜಿ ಆಟಗಾರ ವೀರೆಂದ್ರ ಸೆಹವಾಗ್ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಓಂ ಶಾಂತಿ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಅವರೊಂದಿಗೆ ನನಗೆ ಉತ್ತಮ ಸಂಬಂಧವಿತ್ತು. ಬ್ಯಾಟಿಂಗ್ ವೇಳೆ ನಾನು ದುಡುಕಿನ ಹೊಡೆತವನ್ನು ಹೊಡೆದಾಗಲೆಲ್ಲ, “ಸರಿಯಾಗಿ ಆಟವಾಡಿ, ನಾನು ನಿಮ್ಮ ಬ್ಯಾಟಿಂಗ್ ವೀಕ್ಷಿಸಲು ಬಯಸುತ್ತೇನೆ” ಎಂದು ನನ್ನನ್ನು ಗದರಿಸುತ್ತಿದ್ದರು “ ಎಂದು ನೆನಪಿಸಿಕೊಂಡಿದ್ದಾರೆ.

ಅವರು ತಮ್ಮ ಮಗನಿಗಾಗಿ ನಿರ್ದಿಷ್ಟ ಬ್ರಾಂಡ್ ಕ್ರಿಕೆಟ್ ಪ್ಯಾಡ್‌ ಗಳನ್ನು ಖರೀದಿಸಲು ಬಯಸಿದ್ದರು ಮತ್ತು ಅದರ ಬಗ್ಗೆ ನನ್ನಿಂದ ವಿಚಾರಿಸಿದರು. ನಾನು ಅವನಿಗೆ ಉಡುಗೊರೆಯಾಗಿ ನೀಡಿದ್ದೆ. ಅವರು ಒಬ್ಬ ಸಂಭಾವಿತ ಮತ್ತು ಬಹಳ ಅದ್ಭುತ ವ್ಯಕ್ತಿ. ಓಂ ಶಾಂತಿ ಎಂದು ಸೆಹವಾಗ್ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.