World Cup ಫೈನಲ್ ಪಂದ್ಯದಲ್ಲಿದೆ ವರ್ಣರಂಜಿತ ಕಾರ್ಯಕ್ರಮ; ಏರ್ ಶೋ ಎಷ್ಟು ಗಂಟೆಗೆ?

Team Udayavani, Nov 18, 2023, 11:35 AM IST

World Cup ಫೈನಲ್ ಪಂದ್ಯದಲ್ಲಿದೆ ವರ್ಣರಂಜಿತ ಕಾರ್ಯಕ್ರಮ; ಏರ್ ಶೋ ಎಷ್ಟು ಗಂಟೆಗೆ?

ಅಹಮದಾಬಾದ್: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಕೂಟವು ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ರವಿವಾರ ಅಹಮದಾಬಾದ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಹನ್ನೆರಡು ವರ್ಷಗಳ ಬಳಿಕ ಕಪ್ ಗೆಲ್ಲಲು ಭಾರತ ಯೋಜನೆ ರೂಪಿಸಿದ್ದರೆ, ದಾಖಲೆಯ ಆರನೇ ಬಾರಿಗೆ ಕಪ್ ಗೆಲ್ಲುವ ಯೋಚನೆಯಲ್ಲಿದೆ ಕಾಂಗರೂ ಪಡೆ.

ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯವನ್ನು ಭರ್ಜರಿಯಾಗಿ ನಡೆಸಲು ಬಿಸಿಸಿಐ ಸಿದ್ದತೆ ನಡೆಸುತ್ತಿದೆ. ಈ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆ್ಯಂಥೋನಿ ಅಲ್ಬನೀಸ್ ಅವರು ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ ಹಲವು ಗಾಯಕರು ಫೈನಲ್ ಪಂದ್ಯದ ವೇಳೆ ವರ್ಣರಂಜಿತ ಕಾರ್ಯಕ್ರಮ ನೀಡಲಿದ್ದಾರೆ. ಈ ಬಗ್ಗೆ ಇದೀಗ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಪಂದ್ಯಕ್ಕೂ ಮೊದಲು, ಟಾಸ್ ಬಳಿಕ ಅಂದರೆ 1.35ರಿಂದ 1.50ರವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಲೋಹದ ಹಕ್ಕಿಗಳು ಹಾರಾಟ ನಡೆಸಲಿದ್ದಾವೆ.

ಮೊದಲು ಇನ್ನಿಂಗ್ ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗಧ್ವಿ ಅವರು ಪ್ರದರ್ಶನ ನೀಡಲಿದ್ದಾರೆ. ಮೊದಲು ಇನ್ನಿಂಗ್ ಮುಗಿದ ಬಳಿಕ ಸಿಗುವ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂಧಿ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಪ್ರದರ್ಶನಗಳು ನಡೆಯಲಿದೆ.

ಎರಡನೇ ಇನ್ನಿಂಗ್ಸ್ ನ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ಖ್ಯಾತ ಗಾಯಕಿ ದುವಾ ಲಿಪಾ ಅವರು ಪ್ರದರ್ಶನ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು, ಆದರೆ ಬಿಸಿಸಿಐ ಇಂದು ಬಿಡುಗಡೆ ಮಾಡಿ ಪಟ್ಟಿಯಲ್ಲಿ ದುವಾ ಲಿಪಾ ಹೆಸರಿಲ್ಲ.

ಈವರೆಗಿನ ವಿಶ್ವಕಪ್‌ ವಿಜೇತ ತಂಡಗಳ ನಾಯಕರೆಲ್ಲರಿಗೂ ಆಹ್ವಾನ ನೀಡಲಾಗಿದೆ. ಈ ನಾಯಕರೆಂದರೆ ಕ್ಲೈವ್‌ ಲಾಯ್ಡ್, ಕಪಿಲ್‌ದೇವ್‌, ಅಲನ್‌ ಬಾರ್ಡರ್‌, ಇಮ್ರಾನ್‌ ಖಾನ್‌, ಅರ್ಜುನ ರಣತುಂಗ, ಸ್ಟೀವ್‌ ವಾ, ರಿಕಿ ಪಾಂಟಿಂಗ್‌, ಮೈಕೆಲ್‌ ಕ್ಲಾರ್ಕ್‌, ಇಯಾನ್‌ ಮಾರ್ಗನ್‌. ಮಾಜಿ ಕ್ರಿಕೆಟಿಗರಾದ ಸಚಿನ್‌ ತೆಂಡುಲ್ಕರ್‌, ಯುವರಾಜ್‌ ಸಿಂಗ್‌, ವೀರೇಂದ್ರ ಸೆಹವಾಗ್‌, ಅನಿಲ್‌ ಕುಂಬ್ಳೆ, ಸೌರವ್‌ ಗಂಗೂಲಿ ಮೊದಲಾದವರು ಫೈನಲ್‌ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ.

ತಾರೆಗಳಾದ ಅಮಿತಾಭ್‌ ಬಚ್ಚನ್‌, ರಜನೀಕಾಂತ್‌, ಕಮಲಹಾಸನ್‌, ಮೋಹನ್‌ಲಾಲ್‌, ರಾಮ್‌ಚರಣ್‌ ಕೂಡ ಸ್ಟೇಡಿಯಂಗೆ ಆಗಮಿಸಲಿದ್ದಾರೆ.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.