ಅಪ್ರಾಪ್ತ ಕಬಡ್ಡಿ ಆಟಗಾರ್ತಿ ಮೇಲೆ ಅತ್ಯಾಚಾರ: ಕುಸ್ತಿಪಟು ಬಂಧನ
Team Udayavani, Jul 20, 2017, 5:15 AM IST
ಹೊಸದಿಲ್ಲಿ: ರಾಷ್ಟ್ರೀಯ ಜೂನಿಯರ್ ಕಬಡ್ಡಿ ಆಟಗಾರ್ತಿ ಮೇಲೆ ಕುಸ್ತಿಪಟುವೊಬ್ಬ ಅತ್ಯಾಚಾರ ನಡೆಸಿದ ಪ್ರಕರಣವೊಂದು ನಡೆದಿದೆ. ಆರೋಪಿ 40 ವರ್ಷದ ಕುಸ್ತಿಪಟು ನರೇಶ್ ಯಾದವ್ನನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ನಡೆದಿರುವುದು ಮೇಲ್ನೋಟಕ್ಕೆ ದೃಢ ಪಟ್ಟಿದೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಗಿದ್ದು ಏನು?: ಜುಲೈ 9 ರಂದು ಉತ್ತರ ದಿಲ್ಲಿಯಲ್ಲಿರುವ ಚತ್ರಸಾಲ್ ಕ್ರೀಡಾಂಗಣಕ್ಕೆ ಬಾಲಕಿ ತರಬೇತಿಗಾಗಿ ತೆರಳಿದ್ದಳು. ಈ ಸಂದರ್ಭದಲ್ಲಿ ಕ್ರೀಡಾ ಸಲಹೆ ನೀಡುವ ನೆಪದಲ್ಲಿ ನರೇಶ್ ದಹಿಯಾ ಎಂಬ ಕುಸ್ತಿಪಟು ಬಾಲಕಿಯನ್ನು ತನ್ನ ಕಾರಿಗೆ ಹತ್ತಿಸಿಕೊಂಡಿದ್ದಾನೆ. ಅನಂತರ ಬಾಲಕಿಗೆ ಏನಾಗಿದೆ ಎಂಬುದೆ ಗೊತ್ತಿಲ್ಲ. ಆಕೆ ಎಚ್ಚರಗೊಂಡಾಗ ಫ್ಯಾಟ್ನಲ್ಲಿದ್ದಳು. ತನ್ನ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಆಕೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರು ಸ್ವೀಕರಿಸಿದ ಪೊಲೀಸರು ರಾತ್ರಿಯೇ ಆರೋಪಿಯನ್ನು ಆತನ ಮನೆಯಲ್ಲಿ ಬಂಧಿಸಿದ್ದಾರೆ ಎಂದು ಪ್ರಕರಣದ ನೇತೃತ್ವ ಹೊತ್ತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ: ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆದಿದ್ದು, ಅತ್ಯಾಚಾರ ನಡೆದಿರುವುದು ದೃಡಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಲಕಿ ತೀವ್ರ ಆಘಾತಗೊಂಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳ ದೌರ್ಜನ್ಯ ತಡೆ ಕಾಯಿದೆ ಅಡಿ ದೂರು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ