ಮಹೇಂದ್ರ ಸಿಂಗ್ ಧೋನಿ ಮುಂದಿನ ಟಿ ಟ್ವೆಂಟಿ ವಿಶ್ವಕಪ್ ಆಡುತ್ತಾರೆ: ವಿಂಡೀಸ್ ಆಟಗಾರನ ಭವಿಷ್ಯ

Team Udayavani, Dec 14, 2019, 4:14 PM IST

ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸದ್ಯ ವಿಶ್ರಾಂತಿಯಲ್ಲಿದ್ದು ಯಾವಾಗ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುತ್ತಾರೆ ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ. ಈ ಮಧ್ಯೆ ಧೋನಿ ಟಿ ಟ್ವೆಂಟಿ ವಿಶ್ವ ಕಪ್ ಆಡುತ್ತಾರೆ ಎಂದು ವಿಂಡೀಸ್ ಆಟಗಾರ ಡ್ವೇನ್ ಬ್ರಾವೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಬ್ರಾವೋ ಈ ಮಾತನ್ನು ಹೇಳಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡುತ್ತಾ’’ ಧೋನಿಗೆ ಎಂದಿಗೂ ದಣಿವಾಗುವುದಿಲ್ಲ. ವಿಶ್ವಕಪ್ ಟಿ ಟ್ವೆಂಟಿಯನ್ನುಆಡುತ್ತಾರೆ ಎಂದು ನನಗೆ ನಂಬಿಕೆಯಿದೆ’’ ಎಂದು ಬ್ರಾವೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿದಾಯದಿಂದ ಹೊರಬಂದ ಬ್ರಾವೋ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಿದ್ದಾರೆ. ನಾನು ಈಗಲೂ ದೈಹಿಕನಾಗಿ ಸದೃಡನಿದ್ದೇನೆ. ಆದರೆ ಕ್ರಿಕೆಟ್ ರಾಜಕೀಯದಿಂದ ನಾನು ಕ್ರಿಕೆಟ್ನಿಂದ ದೂರ ಉಳಿದಿದ್ದೆ ಎಂದು ಬ್ರಾವೋ ಹೇಳಿದರು.

ಮುಂದಿನ ಟಿ ಟ್ವೆಂಟಿ ವಿಶ್ವಕಪ್ 2020ರ ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ