ಬಿಸಿಸಿಐ ಮುಂದೆ ಬೇಷರತ್‌ ಕ್ಷಮೆಯಾಚಿಸಿದ ದಿನೇಶ್‌ ಕಾರ್ತಿಕ್‌

Team Udayavani, Sep 9, 2019, 5:29 AM IST

ಹೊಸದಿಲ್ಲಿ: ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಕೂಟದ ವೇಳೆ ಟ್ರಿನ್‌ಬಾಗೊ ನೈಟ್‌ರೈಡರ್ ತಂಡದ ಡ್ರೆಸ್ಸಿಂಗ್‌ ಕೊಠಡಿಯಲ್ಲಿ ಕಾಣಿಸಿಕೊಂಡು ವಿವಾದಕ್ಕೊಳಗಾಗಿದ್ದ ಭಾರತ ಕ್ರಿಕೆಟ್‌ ತಂಡದ ಬ್ಯಾಟ್ಸ್‌ಮನ್‌ ಕಮ್‌ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ ಬೇಷರತ್‌ ಕ್ಷಮೆಯಾಚಿಸಿದ್ದಾರೆ.

ಬಿಸಿಸಿಐ ಬಳಿ ಅನುಮತಿ ಪಡೆಯದೆ ನಟ ಶಾರುಖ್‌ ಖಾನ್‌ ಒಡೆತನದ ತಂಡದ ಕಾರ್ಯಕ್ರಮದಲ್ಲಿ ದಿನೇಶ್‌ ಕಾರ್ತಿಕ್‌ ಕಾಣಿಸಿಕೊಂಡಿದ್ದರು. ಜತೆಗೆ ಟ್ರಿನ್‌ಬಾಗೊ ತಂಡದ ಜೆರ್ಸಿ ಕೂಡ ತೊಟ್ಟಿದ್ದರು. ಇದಕ್ಕೆ ಸಂಬಂಧಪಟ್ಟ ಫೋಟೋಗಳು ಬಿಡುಗಡೆಯಾಗಿದ್ದವು. ಇದರಿಂದ ಬಿಸಿಸಿಐ ಕಾರ್ತಿಕ್‌ಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿತ್ತು.

ಬಿಸಿಸಿಐ ನೋಟಿಸ್‌ಗೆ ಉತ್ತರ
ಇದಕ್ಕೆ ಉತ್ತರಿಸಿದ ದಿನೇಶ್‌ ಕಾರ್ತಿಕ್‌, “ಬಿಸಿಸಿಐ ಬಳಿ ಅನುಮತಿ ಪಡೆಯದೆ ಹೋಗಿರುವುದಕ್ಕೆ ಬೇಷರತ್‌ ಕ್ಷಮೆಯಾಚಿಸುತ್ತಿದ್ದೇನೆ. ಟಿಕೆಆರ್‌ ತಂಡದ ಜತೆಗಿನ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಜತೆಗೆ ತಂಡದ ಆಡಳಿತ ವಿಷಯದಲ್ಲಿ ನಾನು ಯಾವುದೇ ಪಾತ್ರವನ್ನು ಹೊಂದಿಲ್ಲ. ಜತೆಗೆ ಡ್ರೆಸ್ಸಿಂಗ್‌ ಕೊಠಡಿಯಲ್ಲಿ ಇದ್ದಿದ್ದು ನಿಜ. ಆದರೆ ಮುಂದಿನ ಪಂದ್ಯಗಳಿಗಾಗಿ ಕಾದು ಕುಳಿತಿರಲಿಲ್ಲ’ ಎಂದು ಟ್ರೆನಿಡಾಡ್‌ನಿಂದ ಹೊರಡುವ ಮೊದಲು ಪತ್ರದ ಮೂಲಕ ಬಿಸಿಸಿಐಗೆ ಸ್ಪಷ್ಟಪಡಿಸಿದ್ದಾರೆ.

ಐಪಿಎಲ್‌ನಲ್ಲಿ ಶಾರುಖ್‌ ಒಡೆತನದ ಕೋಲ್ಕತಾ ನೈಟ್‌ರೈಡರ್ ತಂಡವನ್ನು ದಿನೇಶ್‌ ಕಾರ್ತಿಕ್‌ ಮುನ್ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ