ಗಾಯಾಳು ದೀಪಾ ಕೂಟದಿಂದ ಹೊರಕ್ಕೆ


Team Udayavani, Mar 17, 2019, 12:30 AM IST

q-6.jpg

ಬಾಕು: 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ನಿರೀಕ್ಷೆಯಲ್ಲಿದ್ದ ಭಾರತದ ಭರವಸೆಯ ಜಿಮ್ನಾಸ್ಟ್‌ ದೀಪಾ ಕರ್ಮಾಕರ್‌ ಗಂಟು ನೋವಿ ನಿಂದಾಗಿ “ಆರ್ಟಿಸ್ಟಿಕ್‌ ಜಿಮ್ನಾಸ್ಟಿಕ್‌ ವಿಶ್ವಕಪ್‌’ನ ವಾಲ್ಟ್ ಸ್ಪರ್ಧೆಯ ಫೈನಲ್‌ನಿಂದ ಹೊರಬಂದಿದ್ದಾರೆ. ಭಾರೀ ನಿರೀಕ್ಷೆಯಲ್ಲಿದ್ದ ದೇಶದ ಕ್ರೀಡಾಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಇದರೊಂದಿಗೆ ಮುಂದಿನ ವಾರ ದೋಹಾದಲ್ಲಿ ನಡೆಯಲಿರುವ ವಿಶ್ವಕಪ್‌ನಿಂದಲೂ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. 

ಇದೇ ಮೊದಲ ಬಾರಿಗೆ ಕಷ್ಟಕರ ಹ್ಯಾಂಡ್‌ಫ್ರಂಟ್‌ 540 ವಾಲ್ಟ್ ವಿಭಾಗದಲ್ಲಿ ಸ್ಪರ್ಧಿಸಿ ಪೈನಲ್‌ ಸುತ್ತಿಗೆ ಪ್ರವೇಶಿಸಿದ ದೀಪಾ ಅವರಿಗೆ ಫೈನಲ್‌ನ ಮೊದಲ ಪ್ರಯತ್ನದ ಲ್ಯಾಂಡಿಂಗ್‌ ವೇಳೆ ಗಂಟು ನೋವು ಕಾಣಿಸಿಕೊಂಡಿದೆ. ಈ ಸಮಸ್ಯೆಯಿಂದಾಗಿ ಎರಡನೇ ಪ್ರಯತ್ನವನ್ನೇ ಮಾಡದೆ ತಮ್ಮ ಆಟವನ್ನು ಕೊನೆಗೊಳಿಸಿದ್ದಾರೆ. 

ಫೈನಲ್‌ಗ‌ೂ ಮೊದಲೇ ನೋವು
“ಫೈನಲ್‌ಗ‌ೂ ಮೊದಲೇ ದೀಪಾಗೆ ಗಂಟು ನೋವು ಕಾಣಿಸಿಕೊಂಡಿತ್ತು. ಆದರೆ ವೈದ್ಯಕೀಯ ಚಿಕಿತ್ಸೆ ಪಡೆದು ಅಭ್ಯಾಸದಲ್ಲಿ ನಿರತರಾದರು. ವಾಲ್ಟ್ ಸ್ಪರ್ಧೆಯ ಫೈನಲ್‌ನ ಮೊದಲ ಪ್ರಯತ್ನದ ಲ್ಯಾಂಡಿಂಗ್‌ ವೇಳೆ ಗಂಟು ನೋವು ಜೋರಾದ ಕಾರಣ ಸ್ಪರ್ಧೆಯಲ್ಲಿ ಮುಂದುವರಿ ಯಲು ಸಾಧ್ಯವಾಗಲಿಲ್ಲ. ಹೀಗಾಗಿ ಕೂಟದಿಂದ ಹೊರಬಂದಿದ್ದಾರೆ. ಇದರೊಂದಿಗೆ ಮುಂದಿನ ವಾರದ ದೋಹಾ ವಿಶ್ವಕಪ್‌ನಲ್ಲೂ ಅವರು ಭಾಗವಹಿಸುತ್ತಿಲ್ಲ. ಭಾರತಕ್ಕೆ ಮರಳಿ ಚಿಕಿತ್ಸೆ ತೆಗೆದುಕೊಂಡು ಇದೇ ವರ್ಷ ನಡೆಯಲಿರುವ ಏಶ್ಯನ್‌ ಹಾಗೂ ವಿಶ್ವ ಚಾಂಪಿಯನ್‌ಶಿಪ್‌ಗೆ ತಯಾರಿ ನಡೆಸಲಿದ್ದಾರೆ’ ಎಂದು ಭಾರತೀಯ ಜಿಮ್ನಾಸ್ಟಿಕ್‌ ಫೆಡರೇಶನ್‌ ಉಪಾಧ್ಯಕ್ಷ ರಿಯಾಜ್‌ ಭಾಟಿ ಹೇಳಿದ್ದಾರೆ. ಜೂನ್‌ನಲ್ಲಿ ಮಂಗೋಲಿಯಾದಲ್ಲಿ ಏಶ್ಯನ್‌ ಚಾಂಪಿಯನ್‌ಶಿಪ್‌ ಹಾಗೂ ಅಕ್ಟೋಬರ್‌ನಲ್ಲಿ ಜರ್ಮನಿಯಲ್ಲಿ ವಿಶ್ವ ಚಾಂಪಿಯನ್‌ಶಿಪ್‌ ನಡೆಯಲಿದ್ದು, ದೀಪಾ ಈ ಕೂಟಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಪ್ರಯತ್ನಿಸಬೇಕಾಗಿದೆ. 

ಬ್ಯಾಲೆನ್ಸ್‌ ಬೀಮ್‌ನಲ್ಲಿ ವಿಫ‌ಲ
ಶುಕ್ರವಾರ ನಡೆದ ಬ್ಯಾಲೆನ್ಸ್‌ ಬೀಮ್‌ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ 20ನೇ ಸ್ಥಾನ ಸಂಪಾದಿಸಿ ಫೈನಲ್‌ ಪ್ರವೇಶಿಸುವಲ್ಲಿ ದೀಪಾ ವಿಫ‌ಲಾರಾಗಿದ್ದರು. 25 ಕ್ರೀಡಾಪಟುಗಳ ಈ ಅರ್ಹತಾ ಸುತ್ತಿನಲ್ಲಿ ದೀಪಾ 10.633 ಅಂಕವನ್ನಷ್ಟೇ ಗಳಿಸಿದರು.
 

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.