ತಪ್ಪುಗಳನ್ನು ತಿದ್ದಿ  ಸರಣಿ ಗೆದ್ದೆವು: ಮಾರ್ಗನ್‌


Team Udayavani, Jul 19, 2018, 6:00 AM IST

11.jpg

ಲೀಡ್ಸ್‌: ಪ್ರವಾಸಿ ಭಾರತ ವಿರುದ್ಧ ಅನುಭವಿಸಿದ ಟಿ20 ಸರಣಿ ಸೋಲಿಗೆ ಇಂಗ್ಲೆಂಡ್‌ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಚುಟುಕು ಕ್ರಿಕೆಟ್‌ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿದ್ದ ಮಾರ್ಗನ್‌ ಪಡೆ ಏಕದಿನದಲ್ಲಿ ಅಷ್ಟೇ ಅಂತರದಿಂದ ಸರಣಿ ಗೆದ್ದು ಬೀಗಿದೆ. ಭಾರತದ ಸತತ ಗೆಲುವಿನ ಅಭಿಯಾನ 9 ಸರಣಿಗಳಿಗೆ ಕೊನೆಗೊಂಡಿದೆ.

ಮಂಗಳವಾರ ಲೀಡ್ಸ್‌ನ ಹೇಡಿಂಗ್ಲೆ ಅಂಗಳದಲ್ಲಿ ನಡೆದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತವನ್ನು 8 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸುವ ಮೂಲಕ ಇಂಗ್ಲೆಂಡ್‌ ಸರಣಿ ವಶಪಡಿಸಿಕೊಂಡಿತು. ಭಾರತ 8 ವಿಕೆಟಿಗೆ 256 ರನ್‌ ಗಳಿಸಿದರೆ, ಇಂಗ್ಲೆಂಡ್‌ 44.3 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 260 ರನ್‌ ಬಾರಿಸಿ ಗೆದ್ದು ಬಂದಿತು. ಜೋ ರೂಟ್‌ ಅವರ ಸತತ 2ನೇ ಶತಕ, ರೂಟ್‌-ಮಾರ್ಗನ್‌ ಮುರಿಯದ 3ನೇ ವಿಕೆಟಿಗೆ ಪೇರಿಸಿದ 186 ರನ್‌ ಜತೆಯಾಟಗಳೆಲ್ಲ ಆತಿಥೇಯರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವು.

ಎಕ್ಸ್‌ಟ್ರಾ ಇನ್ನಿಂಗ್ಸ್‌
ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿಯೊಂದನ್ನು ಕಳೆದುಕೊಂಡಿತು. ಧೋನಿ ಗೈರಲ್ಲಿ ಹಂಗಾಮಿ ನಾಯಕರಾಗಿದ್ದಾಗ ಕೊಹ್ಲಿ ಎರಡೂ ಸರಣಿಗಳಲ್ಲಿ ಭಾರತಕ್ಕೆ ಗೆಲುವು ತಂದಿತ್ತಿದ್ದರು. ಕೊಹ್ಲಿ ಪೂರ್ಣ ಪ್ರಮಾಣದ ನಾಯಕನಾದ ಬಳಿಕ ಆಡಲಾದ ಎಲ್ಲ 6 ಸರಣಿಗಳಲ್ಲೂ ಭಾರತ ಜಯ ಸಾಧಿಸಿತ್ತು.

ಭಾರತ ಸತತ 9 ಏಕದಿನ ಸರಣಿ ಗೆಲುವಿನ ಬಳಿಕ ಮೊದಲ ಸಲ ಸೋಲನುಭವಿಸಿತು. ಭಾರತ ಕೊನೆಯ ಸಲ 2016ರಲ್ಲಿ ಆಸ್ಟ್ರೇಲಿಯ ವಿರುದ್ಧ ಅವರದೇ ನೆಲದಲ್ಲಿ ಸರಣಿ ಸೋತಿತ್ತು.

ಇಂಗ್ಲೆಂಡ್‌ 2017ರಲ್ಲಿ ಭಾರತದ ವಿರುದ್ಧ ಸರಣಿ ಸೋತ ಬಳಿಕ ಸತತ 8 ದ್ವಿಪಕ್ಷೀಯ ಏಕದಿನ ಸರಣಿಗಳಲ್ಲಿ ಜಯ ಸಾಧಿಸಿತು.

ಜೋ ರೂಟ್‌ ಸತತ 2ನೇ ಶತಕ ಬಾರಿಸಿದರು. ಅವರೀಗ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ 2 ಶತಕ ಹೊಡೆದ ಇಂಗ್ಲೆಂಡಿನ 3ನೇ ಕ್ರಿಕೆಟಿಗನಾಗಿದ್ದಾರೆ. ಉಳಿದಿಬ್ಬರೆಂದರೆ ಗ್ರಹಾಂ ಗೂಚ್‌ (1985ರಲ್ಲಿ ಆಸ್ಟ್ರೇಲಿಯ ವಿರುದ್ಧ) ಮತ್ತು ನಿಕ್‌ ನೈಟ್‌ (1996ರಲ್ಲಿ ಪಾಕಿಸ್ಥಾನ ವಿರುದ್ಧ). 

ರೂಟ್‌ ಇಂಗ್ಲೆಂಡ್‌ ಪರ ಏಕದಿನಗಳಲ್ಲಿ ಸರ್ವಾಧಿಕ 13 ಶತಕ ಬಾರಿಸಿದ ದಾಖಲೆ ಸ್ಥಾಪಿಸಿದರು. 

ರೂಟ್‌-ಮಾರ್ಗನ್‌ ಮುರಿಯದ 3ನೇ ವಿಕೆಟಿಗೆ 186 ರನ್‌ ಪೇರಿಸಿದರು. ಇದು ಎಲ್ಲ ವಿಕೆಟ್‌ಗಳಿಗೂ ಅನ್ವಯಿಸುವಂತೆ ಭಾರತದ ವಿರುದ್ಧ ಇಂಗ್ಲೆಂಡ್‌ ದಾಖಲಿಸಿದ ಅತೀ ದೊಡ್ಡ ಜತೆಯಾಟ. 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.