ಇಂಗ್ಲೆಂಡಿಗೆ ಸತತ 4ನೇ ಗೆಲುವು

Team Udayavani, Jun 23, 2018, 6:00 AM IST

ಚೆಸ್ಟರ್‌ ಲೆ ಸ್ಟ್ರೀಟ್‌: ಮತ್ತೂಂದು ದೊಡ್ಡ ಮೊತ್ತದ ಏಕದಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಇಂಗ್ಲೆಂಡ್‌ 6 ವಿಕೆಟ್‌ಗಳಿಂದ ಆಸ್ಟ್ರೇಲಿಯವನ್ನು ಮಣಿಸಿದೆ. ಸತತ 4 ಗೆಲುವಿನೊಂದಿಗೆ ನಾಗಾಲೋಟಗೈದಿದೆ. 

ಗುರುವಾರ ಇಲ್ಲಿ ನಡೆದ ಡೇ-ನೈಟ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ ಆರನ್‌ ಫಿಂಚ್‌ (100) ಮತ್ತು ಶಾನ್‌ ಮಾರ್ಷ್‌ (101) ಅವರ ಶತಕಗಳ ನೆರವಿನಿಂದ 8 ವಿಕೆಟಿಗೆ 310 ರನ್‌ ಪೇರಿಸಿದರೆ, ಇಂಗ್ಲೆಂಡ್‌ 44.4 ಓವರ್‌ಗಳಲ್ಲಿ 4 ವಿಕೆಟಿಗೆ 314 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.

ಇಂಗ್ಲೆಂಡ್‌ ಪರ ಆರಂಭಕಾರ ಜಾಸನ್‌ ರಾಯ್‌ 101 ರನ್‌ ಬಾರಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ರಾಯ್‌-ಬೇರ್‌ಸ್ಟೊ (79) ಮೊದಲ ವಿಕೆಟಿಗೆ 23.4 ಓವರ್‌ಗಳಿಂದ 174 ರನ್‌ ಬಾರಿಸಿ ಭದ್ರ ಅಡಿಪಾಯ ನಿರ್ಮಿಸಿದರು. ಬಟ್ಲರ್‌ ಅಜೇಯ 54 ರನ್‌ ಮಾಡಿದರು. 5ನೇ ಹಾಗೂ ಅಂತಿಮ ಪಂದ್ಯ ಜೂ. 24ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದ್ದು, ಇಂಗ್ಲೆಂಡಿನ ಮುಂದೆ ಕ್ಲೀನ್‌ಸ್ವೀಪ್‌ ಅವಕಾಶವೊಂದು ತೆರೆದುಕೊಂಡಿದೆ.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-8 ವಿಕೆಟಿಗೆ 310 (ಮಾರ್ಷ್‌ 101, ಫಿಂಚ್‌ 100, ಹೆಡ್‌ 63, ವಿಲ್ಲಿ 43ಕ್ಕೆ 4, ವುಡ್‌ 49ಕ್ಕೆ 2). ಇಂಗ್ಲೆಂಡ್‌-44.4 ಓವರ್‌ಗಳಲ್ಲಿ 4 ವಿಕೆಟಿಗೆ 314 (ರಾಯ್‌ 101, ಬೇರ್‌ಸ್ಟೊ 79, ಬಟ್ಲರ್‌ ಔಟಾಗದೆ 54, ಅಗರ್‌ 48ಕ್ಕೆ 2). ಪಂದ್ಯಶ್ರೇಷ್ಠ: ಜಾಸನ್‌ ರಾಯ್‌.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

  • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....