ಇಂಗ್ಲೆಂಡ್ ವಿರುದ್ಧ ಕೊನೆಯ ಪಂದ್ಯದಲ್ಲಿ ಎಡವಿ ಸರಣಿ ಸೋತ ವನಿತೆಯರು
Team Udayavani, Jul 15, 2021, 7:32 AM IST
ಚೆಲ್ಮ್ಸ್ ಪೋರ್ಡ್: ಇಂಗ್ಲೆಂಡ್ ವನಿತೆಯರ ವಿರುದ್ದದ ಅಂತಿಮ ಟಿ20 ಪಂದ್ಯದಲ್ಲಿ ಸೋತ ಭಾರತ ತಂಡ ಸರಣಿ ಸೋಲನುಭವಿಸಿದೆ. ಇದರೊಂದಿಗೆ ಏಕದಿನ ಸರಣಿಯ ಬಳಿಕ ಟಿ20 ಸರಣಿಯಲ್ಲೂ ನಿರಾಶೆ ಅನುಭವಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ 20 ಓವರ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಸ್ಮೃತಿ ಮಂಧನಾ 70 ರನ್ ಮತ್ತ ಹರ್ಮನ್ ಪ್ರೀತ್ ಕೌರ್ 36 ರನ್ ಗಳಿಸಿದರೆ, ಕೊನೆಯಲ್ಲಿ ರಿಚಾ ಘೋಷ್ 13 ಎಸೆತದಲ್ಲಿ 20 ರನ್ ಗಳಿಸಿದರು. ಇಂಗ್ಲೆಂಡ್ ಪರ ಎಕ್ಲೆಸ್ಟೋನ್ ಮೂರು ವಿಕೆಟ್, ಬ್ರಂಟ್ ಒಂದು ವಿಕೆಟ್ ಪಡೆದರು.
ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್ : ಬಂಗಾರ ಬೇಟೆಗೆ ಬಂಪರ್ ಬಹುಮಾನ
ಗುರಿ ಬೆನ್ನತ್ತಿದ ಇಂಗ್ಲೆಂಡ್ ಕೇವಲ ಎರಡು ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಡೇನಿಯಲ್ ವ್ಯಾಟ್ 89 ರನ್ ಮತ್ತು ಸೀವರ್ 42 ರನ್ ಗಳಿಸಿದರು. 18.4 ಓವರ್ ನಲ್ಲಿ ಇಂಗ್ಲೆಂಡ್ ಜಯ ಸಾಧಿಸಿತು. ಇದರೊಂದಿಗೆ ಟಿ20 ಸರಣಿಯನ್ನು 2-1 ಅಂತರದಿಂದ ಜಯಿಸಿತು.
ಡೇನಿಯಲ್ ವ್ಯಾಟ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ನಟಾಲಿಯಾ ಸೀವರ್ ಸರಣಿ ಶ್ರೇಷ್ಠ ಪುರಸ್ಕಾರಕ್ಕೆ ಪಾತ್ರರಾದರು. ಏಕೈಕ ಟೆಸ್ಟ್ ಪಂದ್ಯ ಡ್ರಾ ಆಗಿದ್ದರೆ, ಏಕದಿನ ಸರಣಿಯಲ್ಲಿ 2-1 ಅಂತರದಿಂದ ಇಂಗ್ಲೆಂಡ್ ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ