ಬೆದರಿಕೆಯೊಡ್ಡಿ ಅಪ್ರಾಪ್ರ ಬಾಲಕಿಯ ಅತ್ಯಾಚಾರ: ಪಾಕ್ ಕ್ರಿಕೆಟರ್ ವಿರುದ್ಧ ದೂರು ದಾಖಲು
Team Udayavani, Dec 21, 2021, 3:02 PM IST
ಇಸ್ಲಮಾಬಾದ್: ಪಾಕಿಸ್ಥಾನದ ಕ್ರಿಕೆಟರ್ ಯಾಸಿರ್ ಶಾ ವಿರುದ್ಧ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರಕ್ಕೆ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಾಗಿದೆ. ಇಸ್ಲಮಾಬಾದ್ ನ ಶಾಲಿಮಾರ್ ಪೊಲೀಸ್ ಠಾಣೆಯಲ್ಲಿ ಕ್ರಿಕೆಟಿಗನ ವಿರುದ್ಧ ಪ್ರಕರಣ ದಾಖಲಾಗಿದೆ.
ಯಾಸಿರ್ ಶಾ ಸ್ನೇಹಿತ ಫರ್ಹಾನ್ ತನ್ನ ಮೇಲೆ ಬಂದೂಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು 14 ವರ್ಷದ ಬಾಲಕಿ ಹೇಳಿದ್ದಾಳೆ ಎಂದು ಪಾಕ್ ಸುದ್ದಿ ವಾಹಿನಿ ವರದಿ ಮಾಡಿದೆ. ಘಟನೆಯ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ನೀಡಿದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಯಾಸಿರ್ ಶಾ ಎಚ್ಚರಿಸಿದ್ದಾಗಿ ಬಾಲಕಿ ಹೇಳಿದ್ದಾಳೆ. ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ:21ನೇ ಶತಮಾನ ಈ ಆಟಗಾರನಿಗೆ ಸಲ್ಲುತ್ತದೆ..: ಹಾಡಿ ಹೊಗಳಿದ ವಾಸಿಂ ಅಕ್ರಮ್
“ಯಾಸಿರ್ ಶಾ ತಾನು ಅತ್ಯಂತ ಪ್ರಭಾವಿ ವ್ಯಕ್ತಿ ಮತ್ತು ತನಗೆ ಉನ್ನತ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿದ್ದಾರೆ. ಯಾಸಿರ್ ಶಾ ಮತ್ತು ಫರ್ಹಾನ್ ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರ ಮಾಡುತ್ತಾರೆ ಮತ್ತು ವೀಡಿಯೊಗಳನ್ನು ಮಾಡುತ್ತಾರೆ ” ಎಂದು ಬಾಲಕಿ ಎಫ್ಐಆರ್ನಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಪ್ರತಿಕ್ರಿಯೆ ನೀಡಿದೆ.
ಯಾಸಿರ್ ಶಾ ಪಾಕಿಸ್ಥಾನದ ಪರ 46 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು, 235 ವಿಕೆಟ್ ಗಳನ್ನು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ