ಫಿಟ್ನೆಸ್ ಪರೀಕ್ಷೆ:ರಾಯುಡು ವಿಫಲ
Team Udayavani, Jun 17, 2018, 6:15 AM IST
ಬೆಂಗಳೂರು: 2 ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ ಅಂಬಾಟಿ ರಾಯುಡು ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಯೋ ಯೋ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲರಾದ ಪರಿಣಾಮ ಇಂಗ್ಲೆಂಡ್ಗೆ ಪ್ರಯಾಣಿಸಬೇಕಿರುವ ಭಾರತ ಟಿ20 ತಂಡದಿಂದ ಹೊರಬಿದ್ದಿದ್ದಾರೆ.
ವಿಶೇಷವೆಂದರೆ ಈ ಪರೀಕ್ಷೆಯಲ್ಲಿ ಮಾಜಿ ನಾಯಕ ಧೋನಿ, ಹಾಲಿ ನಾಯಕ ವಿರಾಟ್ ಕೊಹ್ಲಿ, ವೇಗಿ ಭುವನೇಶ್ವರ್ ಕುಮಾರ್, ಸುರೇಶ್ ರೈನಾ ಉತ್ತೀರ್ಣರಾಗಿದ್ದಾರೆ. ರೈನಾ ಈ ಹಿಂದೆ ಫಿಟ್ನೆಸ್ ಕೊರತೆಯಿಂದ ತಂಡದಲ್ಲಿ ಸ್ಥಾನ ಗಳಿಸದೇ ಪರದಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಅಂಬಾಟಿ ರಾಯುಡು ಪ್ರಸ್ತುತ ಮುಗಿದ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.
ಅಲ್ಲಿ ಅವರು ಅದ್ಭುತ ಫಾರ್ಮ್ ಪ್ರದರ್ಶಿಸಿದ್ದರು.ಚೆನ್ನೈ ಚಾಂಪಿಯನ್ ಕೂಡ ಆಗಿತ್ತು. ಇದೇ ಆಧಾರದಲ್ಲಿ ಇಂಗ್ಲೆಂಡ್ಗೆ ಹೊರಟಿರುವ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದರು. ಈಗವರು ಅನಿವಾರ್ಯವಾಗಿ ಹೊರಗುಳಿಯಬೇಕಾಗಿದೆ. ಕೆಲವು ದಿನಗಳ ಹಿಂದೆ ಎ ತಂಡಕ್ಕೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್ ಇದೇ ಪರೀಕ್ಷೆಯಲ್ಲಿ ವಿಫಲರಾಗಿ ಬೇಸರಗೊಂಡಿದ್ದರು. ಅಂಬಾಟಿ ರಾಯುಡು ಭಾರತದ ಪರ 34 ಏಕದಿನ, 6 ಟಿ20 ಪಂದ್ಯವಾಡಿದ್ದಾರೆ. ಅವರು ಕೊನೆಯ ಬಾರಿಗೆ ಅಂದರೆ 2016ರಲ್ಲಿ ಜಿಂಬಾಬ್ವೆಯಲ್ಲಿ ಟಿ20, ಏಕದಿನವಾಡಿದ್ದರು. ಅಲ್ಲಿಂದ ಸ್ಥಾನ ಕಳೆದುಕೊಂಡಿದ್ದವರು ಮತ್ತೆ ಸ್ಥಾನ ಪಡೆಯಲು ವಿಫಲರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್ ಗುದ್ದು
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ