
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
Team Udayavani, Feb 5, 2023, 9:38 AM IST

ಮುಂಬಯಿ: ಪತ್ನಿ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಪತ್ನಿ ಆಂಡ್ರಿಯಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 324,504 ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಇದಾದ ಬಳಿಕ ಸಿಟ್ಟಿನಲ್ಲಿ ಅಡುಗೆಯ ಕಾವಲಿಯನ್ನು ಪತ್ನಿಯ ಮೇಲೆ ಎಸೆದಿದ್ದಾನೆ.ಇದರಿಂದ ಪತ್ನಿ ಆಂಡ್ರಿಯಾ ತಲೆಗೆ ಗಾಯವಾಗಿದೆ. 12 ವರ್ಷದ ಮಗ ತಂದೆಯನ್ನು ತಡೆಯಲು ಯತ್ನಿಸಿದ್ದಾನೆ. ಇದರ ಬಳಿಕವೂ ಕುಡಿದ ಮತ್ತಿನಲ್ಲಿ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪತ್ನಿ ದೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
ಗಾಯಗೊಂಡ ಆಂಡ್ರಿಯಾ ಚಿಕಿತ್ಸೆ ಪಡೆದು ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ.
ಸದ್ಯ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿನೋದ್ ಕಾಂಬ್ಳಿ ಅವರ ಮೊಬೈಲ್ ಸ್ವಿಚ್ ಆಫ್ ಬರುತ್ತಿದೆ ಎಂದು ವರದಿ ತಿಳಿಸಿದೆ.
ಈ ಹಿಂದೆ ಕಳೆದ ಫೆಬ್ರವರಿಯಲ್ಲಿ ಹೌಸಿಂಗ್ ಸೊಸೈಟಿಯ ಗೇಟ್‌ಗೆ ಕಾರು ಢಿಕ್ಕಿ ಹೊಡೆದು, ವಾಚ್ ಮೆನ್ ಹಾಗೂ, ನಿವಾಸಿಗಳೊಂದಿಗೆ ವಾಗ್ವಾದಕ್ಕಿಳಿದ ಪರಿಣಾಮ ಪೊಲೀಸರು ವಿನೋದ್ ಅವರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?
MUST WATCH
ಹೊಸ ಸೇರ್ಪಡೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ