ಅನುಭವದ ಕೊರತೆಯಿಂದ ಸೋಲು: ಗಾವಸ್ಕರ್‌

Team Udayavani, Jul 26, 2017, 7:40 AM IST

ಮುಂಬಯಿ: ವನಿತಾ ವಿಶ್ವಕಪ್‌ ಫೈನಲ್‌ನಲ್ಲಿ ಭಾರತದ ಸೋಲಿಗೆ ಅನುಭವದ ಕೊರತೆಯೇ ಮುಖ್ಯ ಕಾರಣ ಎಂಬುದಾಗಿ ಮಾಜಿ ಕ್ರಿಕೆಟಿಗ ಸುನೀಲ್‌ ಗಾವಸ್ಕರ್‌ ಹೇಳಿದ್ದಾರೆ.

“ಭಾರತ ಈ ಪಂದ್ಯಾವಳಿ ಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿತು. ಆದರೆ ದೊಡ್ಡ ಪಂದ್ಯ ಗಳಲ್ಲಿ, ಅದರಲ್ಲೂ ವಿಶ್ವಕಪ್‌ ಫೈನಲ್‌ನಲ್ಲಿ ಆಡುವಾಗ ಅನುಭವ ನಿರ್ಣಾಯಕ ಪಾತ್ರ ವಹಿಸುತ್ತದೆ. ಇದರ ಕೊರತೆ ವನಿತೆಯರನ್ನು ಕಾಡಿತು…’ ಎಂಬುದಾಗಿ ಗಾವಸ್ಕರ್‌ ಅಭಿಪ್ರಾಯಪಟ್ಟರು.

“ಇದೊಂದು ಕ್ಲೋಸ್‌ ಮ್ಯಾಚ್‌ ಆಗಿತ್ತು. ನಮ್ಮವರು ಗರಿಷ್ಠ ಪ್ರಯತ್ನ ವನ್ನೇ ಮಾಡಿದ್ದರು. ಹೀಗಾಗಿ ಅವರಿಗೆ ಪೂರ್ಣಾಂಕ ನೀಡಬೇಕಾಗುತ್ತದೆ. ಈ ಪಂದ್ಯಾವಳಿಯಲ್ಲಿ ಮಿಥಾಲಿ ಟೀಮ್‌ ಆಡಿದ ರೀತಿಯಿಂದ ನನಗೆ ತುಂಬಾ ಸಂತೋಷವಾಗಿದೆ…’ ಎಂದು ಗಾವಸ್ಕರ್‌ ಹೇಳಿದರು.

“ಹೌದು, ಭಾರತ ಕೊನೆಯ 7 ವಿಕೆಟ್‌ಗಳನ್ನು ಪಟಪಟನೆ ಕಳೆದು ಕೊಂಡಿತು. 20-30 ರನ್ನುಗಳ ಒಂದು ಜತೆಯಾಟ ನಡೆದರೂ ಭಾರತ ಮೇಲುಗೈ ಸಾಧಿಸುತ್ತಿತ್ತು. ಇದಕ್ಕೆ ಮುಖ್ಯವಾಗಿ ಬೇಕಿದ್ದುದು ಅನುಭವ…’ ಎಂದು ಸುನೀಲ್‌ ಗಾವಸ್ಕರ್‌ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...

  • ಈ ವಾರ ಬೆಂಗಳೂರಿನಲ್ಲಿ ಪ್ರತೀವರ್ಷದಂತೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗುತ್ತಿದೆ. ಸುಮಾರು 200ಕ್ಕಿಂತಲೂ ಹೆಚ್ಚಿನ ದೇಶವಿದೇಶಗಳ ಚಿತ್ರಗಳನ್ನೂ...

  • ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ...

  • ಗರ್ಭಧಾರಣೆ ಎಂಬುದು ಶಿಶು ಜನನವನ್ನು ನಿರೀಕ್ಷಿಸುತ್ತಿರುವ ತಾಯಿ ಮಾತ್ರವಲ್ಲದೆ ಇಡೀ ಕುಟುಂಬವೇ ಹರ್ಷೋಲ್ಲಾಸದಲ್ಲಿ ಇರುವ ಸಮಯ. ಗರ್ಭಧಾರಣೆಯ ಒಂಬತ್ತು ತಿಂಗಳುಗಳ...

  • ಪ್ಲಾಸ್ಟಿಕ್‌ ಇಂದು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಕಡಿಮೆ ವೆಚ್ಚದಲ್ಲಿ ತಯಾರಿಕೆ ಹಾಗೂ ಕೈಗೆಟಕುವ ದರದಲ್ಲಿ ಈ ಪ್ಲಾಸ್ಟಿಕ್‌...