ನ್ಯೂಜಿಲ್ಯಾಂಡ್ ಟೆಸ್ಟ್ ಸರಣಿಯಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ
Team Udayavani, Feb 1, 2020, 2:27 PM IST
ಬೆಂಗಳೂರು: ಗಾಯದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ನ್ಯೂಜಿಲ್ಯಾಂಡ್ ಟೆಸ್ಟ್ ಸರಣಿಯಿಂದಲೂ ಹೊರ ಬಿದ್ದಿದ್ದಾರೆ.
ಬೆನ್ನುಹುರಿ ನೋವಿಗೆ ಒಳಗಾಗಿದ್ದ ಹಾರ್ದಿಕ್ ಪಾಂಡ್ಯ ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಂಡಿದ್ದರು. ಸದ್ಯ ಮೇಲ್ನೋಟಕ್ಕೆ ಚೇತರಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಮತ್ತೆ ಲಂಡನ್ ನ ವೈದ್ಯರ ಬಳಿ ಸಲಹೆ ಕೇಳಿದ್ದು ಸಂಪೂರ್ಣ ಫಿಟ್ ಆಗುವವರೆಗೆ ಆಡದಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಹಾರ್ದಿಕ್ ಪಾಂಡ್ಯ ಮತ್ತು ಎನ್ ಸಿಎ ಮುಖ್ಯ ಫಿಸಿಯೋ ಆಶಿಷ್ ಕೌಶಿಕ್ ಜೊತೆ ಲಂಡನ್ ಗೆ ತೆರಳಿದ್ದರು. ಅಲ್ಲಿ ಹಾರ್ದಿಕ್ ಪಾಂಡ್ಯ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯ ಜೇಮ್ಸ್ ಅಲಿಬೋನ್ ಅವರ ಬಳಿ ಸಲಹೆ ಪಡೆದಿದ್ದಾರೆ. ಹಾರ್ದಿಕ್ ಪಾಂಡ್ಯ ಸಂಪೂರ್ಣ ಚೇತರಿಕೆ ಕಾಣುವವರೆಗೆ ಬೆಂಗಳೂರಿನ ಎನ್ ಸಿಎನಲ್ಲಿರಲಿದ್ದಾರೆ.
2019ರ ಸಪ್ಟೆಂಬರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಪಂದ್ಯದಲ್ಲಿ ಕೊನೆಯದಾಗಿ ಆಡಿದ್ದರು.