ರಾಹುಲ್‌ ದ್ರಾವಿಡ್‌ ಗರಡಿಯಲ್ಲಿ ಹಾರ್ದಿಕ್‌ ಪಾಂಡ್ಯ ತರಬೇತಿ ಶುರು

Team Udayavani, Jan 21, 2020, 12:57 PM IST

ಬೆಂಗಳೂರು: ಗಾಯಗೊಂಡಿರುವ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ)ಯಲ್ಲಿ ಕ್ರಿಕೆಟ್‌ ದಿಗ್ಗಜ ರಾಹುಲ್‌ ದ್ರಾವಿಡ್‌ ನಿರ್ದೇಶನದಲ್ಲಿ ಪುನಶ್ಚೇತನ ಶಿಬಿರದಲ್ಲಿ ತರಬೇತಿ ಆರಂಭಿಸಿದ್ದಾರೆ.

ಈಗಾಗಲೇ ಹಾರ್ದಿಕ್‌ ಪಾಂಡ್ಯ ಮುಂದಿನ 20 ದಿನಗಳ ಪುನಶ್ಚೇತನ ಶಿಬಿರವನ್ನು ಎನ್‌ಸಿಎ ನಲ್ಲೇ ಪೂರ್ಣಗೊಳಿಸುವುದಾಗಿ ಪ್ರಕಟಿಸಿದ್ದಾರೆ ಎಂದು ಎನ್‌ಸಿಎ ಮೂಲಗಳು ತಿಳಿಸಿವೆ.

ಆಸೀಸ್‌ ವಿರುದ್ಧ ಭಾರತ ಮುಂಬೈನಲ್ಲಿ ಮೊದಲ ಏಕದಿನ ಪಂದ್ಯ ಆಡುವುದಕ್ಕೂ ಮುನ್ನ ಹಾರ್ದಿಕ್‌ ಪಾಂಡ್ಯ ಭಾರತ ತಂಡದೊಂದಿಗೆ ಅಭ್ಯಾಸ ನಡೆಸಿದ್ದನ್ನು ಸ್ಮರಿಸಬಹುದು. ಸದ್ಯ ನ್ಯೂಜಿಲೆಂಡ್‌ ಸರಣಿಯ ಏಕದಿನ ಪಂದ್ಯಕ್ಕೆ ಹಾರ್ದಿಕ್‌ ಪಾಂಡ್ಯ ಲಭ್ಯವಾಗುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಅವರು ಅಷ್ಟರೊಳಗಾಗಿ ಚೇತರಿಸುವುದು ಕಷ್ಟ ಎಂದು ಹೇಳಲಾಗುತ್ತಿದೆ.

ಕಿವೀಸ್‌ ಸರಣಿಯ ಬಳಿಕ ಮಾರ್ಚ್‌ನಲ್ಲಿ ಆಫ್ರಿಕಾ ವಿರುದ್ಧ ಸರಣಿ ಇದ್ದು ಆ ವೇಳೆಗೆ ಪಾಂಡ್ಯ ಸಂಪೂರ್ಣ ಫಿಟ್‌ ಆಗುವ ನಿರೀಕ್ಷೆ ಇದೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ