6ನೇ ಸ್ಥಾನಕ್ಕೆ ಜಿಗಿದ ಹರ್ಮನ್ಪ್ರೀತ್
Team Udayavani, Jul 26, 2017, 6:50 AM IST
ದುಬಾೖ: ಮಹಿಳಾ ಏಕದಿನ ಕ್ರಿಕೆಟಿಗರ ನೂತನ ರ್ಯಾಂಕಿಂಗ್ ಯಾದಿ ಬಿಡುಗಡೆಯಾಗಿದ್ದು, ಭಾರತ ತಂಡದ ಸ್ಫೋಟಕ ಆಟಗಾರ್ತಿ ಹರ್ಮನ್ಪ್ರೀತ್ ಕೌರ್ 6ನೇ ಸ್ಥಾನಕ್ಕೆ ಜಿಗಿದಿದ್ದಾರೆ. ನಾಯಕಿ ಮಿಥಾಲಿ ರಾಜ್ 2ನೇ ಸ್ಥಾನದಲ್ಲಿದ್ದಾರೆ.
ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಆಸ್ಟ್ರೇಲಿಯ ವಿರುದ್ಧದ ಸೆಮಿಫೈನಲ್ನಲ್ಲಿ ಕೌರ್ 115 ಎಸೆತದಲ್ಲಿ 171 ರನ್ ಬಾರಿಸಿದ್ದರು. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 51 ರನ್ ದಾಖಲಿಸಿದ್ದರು. ಹೀಗಾಗಿ ಕೌರ್ ರ್ಯಾಂಕಿಂಗ್ನಲ್ಲಿ 7 ಸ್ಥಾನಗಳ ಜಿಗಿತ ಕಂಡರು. ಈ ಮೂಲಕ ಅಗ್ರ 10ರಲ್ಲಿ ಸ್ಥಾನ ಪಡೆದ ಭಾರತದ 2ನೇ ಆಟಗಾರ್ತಿಯಾಗಿದ್ದಾರೆ.
ಭಾರತದ ಮತ್ತೂಬ್ಬ ಆಟಗಾರ್ತಿ ಪೂನಂ ರಾವತ್ 14ನೇ ಸ್ಥಾನದಲ್ಲಿದ್ದಾರೆ.
ತಂಡದ ವಿಭಾಗದ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ಭಾರತ 4ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ