
IPL 2023: ಫೈನಲ್ ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?
Team Udayavani, May 28, 2023, 6:35 PM IST

ಅಹಮದಾಬಾದ್: ಇಲ್ಲಿನ ಐಕಾನಿಕ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 2023 ರ ಋತುವಿನ ಫೈನಲ್ ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ನಾಲ್ಕು ಬಾರಿ ಐಪಿಎಲ್ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಅನ್ನು ಎದುರಿಸಲಿದೆ.
ಭಾನುವಾರ ನಡೆಯಲಿರುವ ಸಿಎಸ್‌ಕೆ ಮತ್ತು ಜಿಟಿ ನಡುವಿನ ಪಂದ್ಯದಲ್ಲಿ ಐದನೇ ಬಾರಿಗೆ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ವರ್ಷದ ಐಪಿಎಲ್ ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗಲಿವೆ.
ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತರು ಎಷ್ಟು ಹಣ ಪಡೆಯುತ್ತಾರೆ ಎನ್ನುವುದು ಕುತೂಲಕಾರಿ ವಿಚಾರ.
ಇದನ್ನೂ ಓದಿ:ಬಜರಂಗದಳ, ಆರ್ ಎಸ್ಎಸ್ ಬ್ಯಾನ್ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ: Laxmi hebbalkar
ವರದಿಗಳ ಪ್ರಕಾರ, ಐಪಿಎಲ್ 2023 ರ ವಿಜೇತರು 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯುತ್ತಾರೆ. ರನ್ನರ್ ಅಪ್ ತಂಡ 15 ಕೋಟಿ ರೂಪಾಯಿಗಳನ್ನು ಪಡೆಯುತ್ತಾರೆ. ಋತುವಿನಲ್ಲಿ ಮೂರನೇ ಸ್ಥಾನ ಪಡೆದ ರೋಹಿತ್ ಶರ್ಮಾ ಅವರ ಮುಂಬೈ ಇಂಡಿಯನ್ಸ್ 7 ಕೋಟಿ ರೂಪಾಯಿಗಳನ್ನು ಪಡೆಯುತ್ತದೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಮತ್ತು ಚೆನ್ನೈ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಚೆನ್ನೈ ತಂಡವು ಸುಲಭ ಜಯ ಸಾಧಿಸಿತ್ತು. ಎರಡನೆ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದ ಗುಜರಾತ್ ಸತತ ಎರಡನೇ ಫೈನಲ್ ತಲುಪಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ