Suspension; ಲಂಕಾ ಕ್ರಿಕೆಟ್ ಮಂಡಳಿ ಅಮಾನತು; ಎಷ್ಟು ಸಮಯ ಕ್ರಿಕೆಟ್ ಆಡುವಂತಿಲ್ಲ?

Team Udayavani, Nov 11, 2023, 10:58 AM IST

Suspension; ಲಂಕಾ ಕ್ರಿಕೆಟ್ ಮಂಡಳಿ ಅಮಾನತು; ಎಷ್ಟು ಸಮಯ ಕ್ರಿಕೆಟ್ ಆಡುವಂತಿಲ್ಲ?

ದುಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ನಿರಶಾದಾಯಕ ಪ್ರದರ್ಶನ ನೀಡುತ್ತಿರುವ ಶ್ರೀಲಂಕಾ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ), ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ಸದಸ್ಯತ್ವವನ್ನು ರದ್ದು ಮಾಡಿದೆ.

ವಿಶ್ವಕಪ್‌ ನಲ್ಲಿ ಶ್ರೀಲಂಕಾ ಕಳಪೆ ಪ್ರದರ್ಶನ ನೀಡಿದ್ದರಿಂದ ಸಿಟ್ಟಾಗಿದ್ದ ಅಲ್ಲಿನ ಕ್ರೀಡಾಸಚಿವ; ಇಡೀ ಕ್ರಿಕೆಟ್‌ ಮಂಡಳಿಯನ್ನೇ ವಿಸರ್ಜನೆ ಮಾಡಿದ್ದರು. ನಂತರ ಅಲ್ಲಿನ ನ್ಯಾಯಾಲಯ ಮಂಡಳಿಯನ್ನು ಪುನಃಸ್ಥಾಪನೆ ಮಾಡಿತ್ತು. ಈ ಎಲ್ಲ ಪ್ರಕ್ರಿಯೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಐಸಿಸಿ, ಶುಕ್ರವಾರ ಸಭೆ ನಡೆಸಿ ಶ್ರೀಲಂಕಾದ ಸದಸ್ಯತ್ವವನ್ನು ರದ್ದು ಮಾಡಿದೆ. ಐಸಿಸಿ ನಿಯಮಗಳ ಪ್ರಕಾರ ಅದರ ಅಂಗಸಂಸ್ಥೆಗಳಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಗಳು ಹಸ್ತಕ್ಷೇಪ ಮಾಡುವಂತಿಲ್ಲ. ಹಾಗೆ ಮಾಡಿದರೆ ಆ ಸಂಸ್ಥೆಗಳ ಸದಸ್ಯತ್ವವನ್ನೇ ಇಲ್ಲ ಮಾಡುತ್ತದೆ.

ಇನ್ನೀಗ ಶ್ರೀಲಂಕಾ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೂಟಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವಾಗ ಐಸಿಸಿಗೆ ಸರ್ಕಾರದ ಪ್ರಭಾವ ಇಲ್ಲವಾಗಿದೆ ಎನಿಸುತ್ತದೋ, ಆಗಲೇ ಲಂಕಾಕ್ಕೆ ಮತ್ತೆ ಮಾನ್ಯತೆ ಸಿಗಲಿದೆ. ಈಗಾಗಲೇ ತೀವ್ರ ಹೊಡೆತ ತಿಂದಿರುವ ಲಂಕಾಕ್ಕೆ ಇದು ಮತ್ತೂಂದು ಹೊಡೆತವಾಗಿದೆ.

ಶ್ರೀಲಂಕಾ ಅಧ್ಯಕ್ಷ ಶಮ್ಮಿ ಅವರೇ ಮಂಡಳಿಯನ್ನು ಅಮಾನತುಗೊಳಿಸುವಂತೆ ಐಸಿಸಿಗೆ ಕೇಳಿಕೊಂಡರು ಎಂದು ಇಎಸ್‌ಪಿಎನ್‌ ಕ್ರಿಕ್‌ಇನ್‌ಫೋ ವರದಿ ಮಾಡಿದೆ. ಐಸಿಸಿ ಮಂಡಳಿಯು ಶುಕ್ರವಾರ (ನವೆಂಬರ್ 10) ಆನ್‌ಲೈನ್‌ನಲ್ಲಿ ಸಭೆ ಸೇರಿ ಶ್ರೀಲಂಕಾ ಕ್ರಿಕೆಟ್‌ನ ವಿಷಯಗಳಲ್ಲಿ ಸರ್ಕಾರದ ಹಸ್ತಕ್ಷೇಪದ ಕುರಿತು ಚರ್ಚಿಸಿತ್ತು. ವಿಶ್ವಕಪ್‌ ಪ್ರಯುಕ್ತ ಶಮ್ಮಿ ಭಾರತದಲ್ಲಿದ್ದಾರೆ. ಐಸಿಸಿ ಅವರನ್ನು ಅಧ್ಯಕ್ಷರನ್ನಾಗಿ ಗುರುತಿಸುವುದನ್ನು ಮುಂದುವರಿಸಿದೆ. ವಿಶ್ವಕಪ್ ಮುಗಿದ ನಂತರ ಅಹಮದಾಬಾದ್‌ನಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಶಮ್ಮಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಅಮಾನತುಗೊಂಡಿರುವ ಐಸಿಸಿಯ ಎರಡನೇ ಪೂರ್ಣ ಸದಸ್ಯ ತಂಡ ಶ್ರೀಲಂಕಾ. ಹಸ್ತಕ್ಷೇಪದ ಕಾರಣಕ್ಕಾಗಿಯೇ ಜಿಂಬಾಬ್ವೆಯನ್ನು 2019 ರಲ್ಲಿ ಅಮಾನತುಗೊಳಿಸಲಾಗಿತ್ತು. ಐಸಿಸಿ ಶ್ರೀಲಂಕಾದ ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಇನ್ನೂ ಘೋಷಿಸಿಲ್ಲ, ಅದು ಕೆಲವೇ ದಿನಗಳಲ್ಲಿ ಬಹಿರಂಗಗೊಳ್ಳುತ್ತದೆ.

ಶ್ರೀಲಂಕಾವು ಡಿಸೆಂಬರ್‌ ವರೆಗೆ ಯಾವುದೇ ಕ್ರಿಕೆಟ್ ಪಂದ್ಯವನ್ನು ಹೊಂದಿಲ್ಲ. ಈ ವರ್ಷವೂ ಅವರು ಐಸಿಸಿಯಿಂದ ಯಾವುದೇ ಹಣವನ್ನು ಸ್ವೀಕರಿಸಲಿಲ್ಲ. ಮುಂದಿನ ವರ್ಷ ಜನವರಿ ಮತ್ತು ಫೆಬ್ರವರಿಯಲ್ಲಿ ಐಸಿಸಿ ಪುರುಷರ U19 ಕ್ರಿಕೆಟ್ ವಿಶ್ವಕಪ್ ಅನ್ನು ಶ್ರೀಲಂಕಾ ಆಯೋಜಿಸುತ್ತದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.