ಟಿ20 ಬ್ಯಾಟಿಂಗ್ ರ್ಯಾಂಕಿಂಗ್: ಮೂರಕ್ಕೇರಿದ ಸ್ಮತಿ ಮಂಧನಾ
Team Udayavani, Mar 11, 2019, 4:44 AM IST
ದುಬಾೖ: ಪ್ರವಾಸಿ ಇಂಗ್ಲೆಂಡ್ ಎದುರಿನ ಟಿ20 ಸರಣಿಯಲ್ಲಿ ಭಾರತ ವೈಟ್ವಾಶ್ ಅನುಭವಿಸಿದರೂ ಉಸ್ತುವಾರಿ ನಾಯಕಿ ಸ್ಮತಿ ಮಂಧನಾ ನೂತನ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ 3 ಸ್ಥಾನಗಳ ಪ್ರಗತಿ ಸಾಧಿಸಿ ಮೂರನೇ ಸ್ಥಾನಕ್ಕೇರಿದ್ದಾರೆ. ಇದು ಅವರ ಜೀವನಶ್ರೇಷ್ಠ ರ್ಯಾಂಕಿಂಗ್ ಆಗಿದೆ.
ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ಯಾದಿಯಲ್ಲಿ ನಂಬರ್ ವನ್ ಆಗಿರುವ ಮಂಧನಾ, ಟಿ20 ಸರಣಿಯ 3 ಪಂದ್ಯಗಳಿಂದ 72 ರನ್ ಮಾಡಿದ್ದರು. ಬೌಲಿಂಗ್ ರ್ಯಾಂಕಿಂಗ್ನಲ್ಲಿ ರಾಧಾ ಯಾದವ್ 5 ಸ್ಥಾನ ಮೇಲೇರಿದ್ದು, 5ನೇ ಸ್ಥಾನಕ್ಕೆ ಬಂದಿದ್ದಾರೆ. ಇಂಗ್ಲೆಂಡ್ ವಿರುದ್ಧ 2 ಪಂದ್ಯಗಳಿಂದ ರಾಧಾ 3 ವಿಕೆಟ್ ಉರುಳಿಸಿದ್ದರು. ಎಡಗೈ ಸ್ಪಿನ್ನರ್ ಏಕ್ತಾ ಬಿಷ್ಟ್ 59ರಿಂದ 56ನೇ ಸ್ಥಾನಕ್ಕೆ, ಆಫ್ ಸ್ಪಿನ್ನರ್ ಅನುಜಾ ಪಾಟೀಲ್ 35ರಿಂದ 31ನೇ ಸ್ಥಾನಕ್ಕೆ ಏರಿದ್ದಾರೆ.
ಇಂಗ್ಲೆಂಡ್ ನಂ.2
ಭಾರತದ ವಿರುದ್ಧ 3-0 ಸರಣಿ ಜಯದ ಮೂಲಕ ಇಂಗ್ಲೆಂಡ್ ತಂಡ ನ್ಯೂಜಿಲ್ಯಾಂಡನ್ನು ಹಿಂದಿಕ್ಕಿ ದ್ವಿತೀಯ ಸ್ಥಾನಕ್ಕೆ ನೆಗೆದಿದೆ. ಈ ಸಾಧನೆಗಾಗಿ ಮೂರಂಕ (277) ಸಂಪಾದಿಸಿದ ಆಂಗ್ಲ ವನಿತೆಯರು ಅಗ್ರಸ್ಥಾನಿ ಆಸ್ಟ್ರೇಲಿಯಕ್ಕಿಂತ 6 ಅಂಕಗಳ ಹಿನ್ನಡೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ