
WTC Final: ಆಸ್ಟ್ರೇಲಿಯಾ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ
ನಾಲ್ಕು ಸೀಮರ್‌ಗಳು ಮತ್ತು ಒಬ್ಬ ಸ್ಪಿನ್ನರ್ ಜಡೇಜಾ ತಂಡದಲ್ಲಿ
Team Udayavani, Jun 7, 2023, 3:03 PM IST

ಲಂಡನ್ : ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಬುಧವಾರ ಆರಂಭವಾದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಬಳಿಕ ಪ್ರತಿಕ್ರಿಯಿಸಿದ ನಾಯಕ ರೋಹಿತ್ ಶರ್ಮಾ, ನಾವು ಬೌಲ್ ಮಾಡುತ್ತೇವೆ. ಹವಾಮಾನವು ಮೋಡ ಕವಿದಿದೆ. ಪಿಚ್ ತುಂಬಾ ಬದಲಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ನಾಲ್ಕು ಸೀಮರ್‌ಗಳು ಮತ್ತು ಒಬ್ಬ ಸ್ಪಿನ್ನರ್ ಜಡೇಜಾ ಆಡಲಿಳಿಯಲಿದ್ದಾರೆ.. ಅಶ್ವಿನ್ ಅವರನ್ನು ಬಿಡುವುದು ಯಾವಾಗಲೂ ಕಠಿಣವಾಗಿದೆ. ಅವರು ಹಲವು ವರ್ಷಗಳ ಅವಧಿಯಲ್ಲಿ ನಮಗೆ ಮ್ಯಾಚ್ ವಿನ್ನರ್ ಆಗಿದ್ದಾರೆ. ಆದರೆ ತಂಡಕ್ಕೆ ಅಗತ್ಯವಿರುವ ಕೆಲಸಗಳನ್ನು ನಾವು ಮಾಡಬೇಕು ಮತ್ತು ಅಂತಿಮವಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. ರಹಾನೆ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. 80 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅವರು ತಂಡಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸ್ವಲ್ಪ ಸಮಯದವರೆಗೆ ಹೊರಗಿದ್ದರಾದರೂ ಅವರ ಅನುಭವವು ನೆರವಾಗಲಿದೆ ಎಂದರು.
ತಂಡ ಇಂತಿದೆ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್, ನಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

Women’s Hockey : ಸಂಗೀತಾ ಹ್ಯಾಟ್ರಿಕ್; ಸಿಂಗಾಪುರ ವಿರುದ್ಧ 13-0 ಗೆಲುವು

Asian Games ಬಾಕ್ಸಿಂಗ್: ಥಾಪ, ಸಂಜೀತ್‌ಗೆ ಆಘಾತ

ODI: ಭಾರತದ ಎದುರು ವೈಟ್‌ವಾಶ್ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ
MUST WATCH
ಹೊಸ ಸೇರ್ಪಡೆ

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್ ನಿರೀಕ್ಷೆ

Animal Teaser: ಸಿರಿವಂತನ ರಗಡ್ ಕಹಾನಿ; ಮಾಸ್ ಲುಕ್ ನಲ್ಲಿ ಮಿಂಚಿದ ʼರಾಕ್ ಸ್ಟಾರ್ʼ

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ