INDvsAUS: ಆಸೀಸ್ ಪ್ರವಾಸದಲ್ಲಿ ಭಾರತಕ್ಕೆ ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯ
Team Udayavani, Aug 9, 2024, 6:18 PM IST
ಮುಂಬೈ: ಈ ವರ್ಷದ ಅಂತ್ಯದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡವು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದೆ. ಈ ಸರಣಿಯಲ್ಲಿ ಭಾರತವು ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಎರಡು ಪಂದ್ಯಗಳ ನಡುವೆ ಭಾರತವು ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯ ಆಡಲಿದೆ ಎಂದು ವರದಿಯಾಗಿದೆ.
ನವೆಂಬರ್ 22ರಿಂದ ಆಸೀಸ್ ವಿರುದ್ದದ ಐದು ಟೆಸ್ಟ್ ಪಂದ್ಯಗಳ ಬಾರ್ಡರ್ – ಗಾವಸ್ಕರ್ ಟ್ರೋಫಿ ಆರಂಭವಾಗಲಿದೆ. ಈ ಸರಣಿಯು ಜನವರಿ 7ರವರೆಗೆ ನಡೆಯಲಿದೆ.
1991-92ರ ಋತುವಿನ ನಂತರ ಎರಡು ಬಲಿಷ್ಠ ತಂಡಗಳು ಮೊದಲ ಬಾರಿಗೆ ಐದು ಟೆಸ್ಟ್ ಗಳ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಭಾರತ ತಂಡವು ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಕ್ಯಾನ್‌ಬೆರಾದ ಮನುಕಾ ಓವಲ್ ನಲ್ಲಿ ಪ್ರಧಾನ ಮಂತ್ರಿ ಇಲೆವೆನ್ ವಿರುದ್ಧ ಹಗಲು-ರಾತ್ರಿ ಅಭ್ಯಾಸ ಪಂದ್ಯವನ್ನು ಆಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಮ್ಮ ವೆಬ್‌ಸೈಟ್ ನಲ್ಲಿ ತಿಳಿಸಿದೆ.
ಡಿಸೆಂಬರ್ 6ರಿಂದ ಅಡಿಲೇಡ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯವು ಪಿಂಕ್ ಬಾಲ ಟೆಸ್ಟ್ ಪಂದ್ಯವಾಗಿರಲಿದೆ. ಇದಕ್ಕೆ ಅಭ್ಯಾಸ ನಡೆಸುವ ನಿಟ್ಟಿನಲ್ಲಿ ಈ ಎರಡು ದಿನದ ಪಂದ್ಯ ಆಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.