ಫೆ. 15ಕ್ಕೆ ಆಸೀಸ್‌ ಸರಣಿಗೆ ಭಾರತ ತಂಡ ಪ್ರಕಟ

Team Udayavani, Feb 13, 2019, 12:30 AM IST

b-16.jpg

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಟಿ20 ಹಾಗೂ 5 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಯ ರಾಷ್ಟ್ರೀಯ ಆಯ್ಕೆ ಮಂಡಳಿ ಫೆ. 15ಕ್ಕೆ ಭಾರತ ತಂಡವನ್ನು ಪ್ರಕಟಿಸಲಿದೆ.

ಮುಂಬರುವ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಹಿನ್ನೆಲೆಯಲ್ಲಿ ಈ ಸರಣಿ ಆಟಗಾರರಿಗೆ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು, ಆಯ್ಕೆ ಮಂಡಳಿಯ ಗಮನ ಸೆಳೆಯಲು ಉತ್ತಮ ವೇದಿಕೆ ಆಗಿರಲಿದೆ. ಎಷ್ಟರಮಟ್ಟಿಗೆ ಆಟಗಾರರು ಇದನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ. ಭಾರತ ಈಗಾಗಲೇ ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್‌ ನೆಲದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಸರಣಿ ಗೆಲುವಿನ ದಾಖಲೆ ಬರೆದಿದೆ. ಇದು ತವರಿನಲ್ಲಿ ಆಡುವ ಭಾರತದ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಲಿದೆ.

ರಾಹುಲ್‌, ರಹಾನೆಗೆ ಅವಕಾಶ
ವಿಶ್ವಕಪ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಆಟಗಾರರ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಆಸ್ಟ್ರೇಲಿಯ ಸರಣಿಯಲ್ಲಿ ಸಾಧಾರಣ ನಿರ್ವಹಣೆ ನೀಡಿದ್ದ ಕೆ.ಎಲ್‌. ರಾಹುಲ್‌ ಹಾಗೂ ಅಜಿಂಕ್ಯ ರಹಾನೆಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಈ ಸರಣಿಯಲ್ಲಿ ಇವರಿಬ್ಬರಿಗೆ ಸಾಮರ್ಥ್ಯ ಸಾಬೀತುಪಡಿಸಲು ಕೊನೆ ಅವಕಾಶ ನೀಡಲಾಗುತ್ತದೆ. ಸಿಕ್ಕ ಅವಕಾಶವನ್ನು ಚೆನ್ನಾಗಿ ಉಪಯೋಗಿಸಿಕೊಂಡು ರನ್‌ ಮಳೆ ಸುರಿಸಿದರಷ್ಟೇ ಇವರಿಗೆ ವಿಶ್ವಕಪ್‌ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ಹೇಳಲಾಗಿದೆ.

ಕೊಹ್ಲಿ ವಾಪಸ್‌ ಖಚಿತ
ನ್ಯೂಜಿಲ್ಯಾಂಡ್‌ ವಿರುದ್ಧದ ಸರಣಿಯ ಕೊನೆಯ ಎರಡು ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದ ವಿರಾಟ್‌ ಕೊಹ್ಲಿ ಮತ್ತೆ ತಂಡವನ್ನು ಸೇರಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಇದರಿಂದಾಗಿ ರೋಹಿತ್‌ ಶರ್ಮ ಅವರಿಗೆ ಟಿ20 ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬೌಲಿಂಗ್‌ನಲ್ಲೂ  ಬದಲಾವಣೆ ನಿರೀಕ್ಷೆ
ಆಸೀಸ್‌ ವಿರುದ್ಧದ ಸರಣಿಯಲ್ಲಿ ಬೌಲಿಂಗ್‌ ವಿಭಾಗದಲ್ಲಿ ಕೂಡ ಕೆಲ ಬದಲಾವಣೆಯಾಗುವ ನಿರೀಕ್ಷೆಯಿದೆ. ಟಿ20 ಸ್ಪೆಷಲಿಸ್ಟ್‌ ಬೌಲರ್‌ ಯಜುವೇಂದ್ರ ಚಾಹಲ್‌ ಹಾಗೂ ಕುಲದೀಪ್‌ ಯಾದವ್‌ಗೆ ವಿಶ್ರಾಂತಿ ನೀಡಿ ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ. ಮತ್ತೂಂದು ಕಡೆ ವೇಗಿ ಜಸ್‌ಪ್ರೀತ್‌ ಬುಮ್ರಾ ಮತ್ತೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿದೆ.

ವಿಕೆಟ್‌ ಕೀಪಿಂಗ್‌ಗಾಗಿ ಪೈಪೋಟಿ
ವಿಶ್ವಕಪ್‌ ತಂಡದಲ್ಲಿ ಮೊದಲ ವಿಕೆಟ್‌ ಕೀಪರ್‌ ಧೋನಿ. ಅವರ ಅನಂತರ ಎರಡನೇ ವಿಕೆಟ್‌ ಕೀಪಿಂಗ್‌ಗಾಗಿ ದಿನೇಶ್‌ ಕಾರ್ತಿಕ್‌ ಮತ್ತು ರಿಷಭ್‌ ಪಂತ್‌ ನಡುವೆ ಪ್ರಬಲ ಸ್ಪರ್ಧೆ ಇದೆ. ಹೀಗಾಗಿ ಆಸೀಸ್‌ ವಿರುದ್ಧದ ಸರಣಿ ಈ ಇಬ್ಬರೂ ಆಟಗಾರರಿಗೆ ಮಹತ್ವದ್ದಾಗಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.