ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸ
Team Udayavani, Oct 20, 2022, 5:51 PM IST
ಢಾಕಾ: 2015 ರ ನಂತರ ಮೊದಲ ಬಾರಿಗೆ ಭಾರತ ತಂಡವು ಡಿಸೆಂಬರ್ 4 ರಿಂದ ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಲಿದೆ ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ.
ಢಾಕಾದ ಮೀರ್ಪುರ್ ಸ್ಟೇಡಿಯಂನಲ್ಲಿ ಡಿಸೆಂಬರ್ 4, 7 ಮತ್ತು 10 ರಂದು ಮೂರು ಏಕದಿನ ಪಂದ್ಯಗಳ ಆತಿಥ್ಯ ವಹಿಸಲಿದ್ದು, ಡಿಸೆಂಬರ್ 14 ರಿಂದ 18 ರವರೆಗೆ ಮೊದಲ ಟೆಸ್ಟ್ ನಡೆಯಲಿದೆ. ಡಿಸೆಂಬರ್ 22 ರಿಂದ 26 ರವರೆಗೆ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಢಾಕಾದಲ್ಲಿ ನಡೆಯಲಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎರಡೂ ದೇಶಗಳ ಅಭಿಮಾನಿಗಳು ಮತ್ತೊಂದು ಸ್ಮರಣೀಯ ಸರಣಿಗಾಗಿ ಕಾತರದಿಂದ ಕಾಯುತ್ತಿದ್ದಾರೆ” ಎಂದು ಹಸನ್ ಹೇಳಿದರು.
ವೇಳಾಪಟ್ಟಿಯನ್ನು ದೃಢೀಕರಿಸುವಲ್ಲಿ ನಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ. ಭಾರತ ತಂಡವನ್ನು ಬಾಂಗ್ಲಾದೇಶಕ್ಕೆ ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ
ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ಸ್ಪೋರ್ಟ್ಸ್ ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ