ಬೆಂಗಳೂರು ಟೆಸ್ಟ್ನಿಂದ ಹೊರಬಿದ್ದ ವೇಗಿ ಶಮಿ
Team Udayavani, Jun 12, 2018, 6:00 AM IST
ಬೆಂಗಳೂರು: ಫಿಟ್ನೆಸ್ ಟೆಸ್ಟ್ನಲ್ಲಿ ತೇರ್ಗಡೆಯಾಗಲು ವಿಫಲರಾದ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅಫ್ಘಾನಿಸ್ಥಾನ ವಿರುದ್ಧದ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಶಮಿ ಬದಲಿಗೆ ದಿಲ್ಲಿಯ ಮಧ್ಯಮ ವೇಗದ ಬೌಲರ್ ನವದೀಪ್ ಸೈನಿ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಸೈನಿ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲು.
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ಶಮಿ ಫಿಟ್ನೆಸ್ ಪರೀಕ್ಷೆಗೆ ಒಳಗಾಗಿದ್ದರು. ನವದೀಪ್ ಸೈನಿ ಭಾರತದ ಭರವಸೆಯ ವೇಗಿಗಳಲ್ಲಿ ಒಬ್ಬರಾಗಿದ್ದು, ಮುಂದಿನ ತಿಂಗಳು “ಎ’ ತಂಡದೊಂದಿಗೆ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ. 31 ಪ್ರಥಮ ದರ್ಜೆ ಪಂದ್ಯಗಳಿಂದ 96 ವಿಕೆಟ್ ಉರುಳಿಸಿದ ಸಾಧನೆ ಸೈನಿ ಅವರದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ