ಸಚಿನ್ ದಾಖಲೆಯನ್ನು ಮುರಿಯಲು ವಿರಾಟ್ ಸಜ್ಜು: ಮೈಲಿಗಲ್ಲು ಸೃಷ್ಟಿಸಲಿದ್ದಾರ ಕಿಂಗ್ ಕೊಹ್ಲಿ !
Team Udayavani, Dec 1, 2020, 2:01 PM IST
ಸಿಡ್ನಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿಯಲು ಸಜ್ಜಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಕ್ಯಾನ್ ಬೆರಾದಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯದ ವೇಳೆ ಈ ಬೃಹತ್ ಮೈಲಿಗಲ್ಲು ಸಾಧಿಸುವ ಉತ್ಸಾಹದಲ್ಲಿದ್ದು, ಈಗಾಗಲೇ ಸಿದ್ದತೆ ಆರಂಭಿಸಿದ್ದಾರೆ.
ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ಪಡೆಯ ವಿರುದ್ಧ ಕಳೆದೆರೆಡು ಪಂದ್ಯಗಳಲ್ಲಿ ಮುಗ್ಗರಿಸಿರುವ ಭಾರತ ಸರಣಿಯನ್ನು ಕೈಚೆಲ್ಲಿದೆ. ಆದರೇ ನಾಯಕ ಕೊಹ್ಲಿ ಕಳೆದ ಪಂದ್ಯದಲ್ಲಿ 89 ರನ್ ಸಿಡಿಸಿ ತಮ್ಮ ಸಾಮರ್ಥ್ಯ ಸಾಬಿತುಪಡಿಸಿದ್ದರು. ಅದಾಗ್ಯೂ ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಅನುಭವಿಸಿತ್ತು.
ಇದೀಗ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಕೊಹ್ಲಿ ಪಡೆ ಶತಯಾಗತಯಾ ಪ್ರಯತ್ನ ನಡೆಸುತ್ತಿದ್ದು, 3ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಪುಡಿಗಟ್ಟಲು ಸಜ್ಜಾಗಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ
ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಅತೀ ವೇಗವಾಗಿ 12 ಸಾವಿರ ರನ್ ಗಳಿಸಿರುವ ಸಾಧನೆ ಸಚಿನ್ ಮಡಿಲಲ್ಲಿದ್ದು, ಒಂದು ವೇಳೆ ಕೊಹ್ಲಿ ಕ್ಯಾನ್ ಬೆರಾದಲ್ಲಿ ನಡೆಯಲಿರುವ ಪಂದ್ಯದಲ್ಲಿ 23 ರನ್ ಗಳಿಸಿದರೇ ಸಚಿನ್ ದಾಖಲೆ ಮುರಿಯಲಿದೆ.
309 ಪಂದ್ಯಗಳ 300 ಇನ್ನಿಂಗ್ಸ್ ನಲ್ಲಿ ಸಚಿನ್ 12 ಸಾವಿರದ ಗಡಿ ದಾಟಿದ್ದು, ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ನಂತರದಲ್ಲಿ ಶ್ರೀಲಂಕಾದ ಕುಮಾರ್ ಸಂಗಕ್ಕರಾ, ಸನತ್ ಜಯಸೂರ್ಯ, ಮಹೇಲಾ ಜಯವರ್ಧನೆ ಇದ್ದಾರೆ.
ಕೊಹ್ಲಿ ಈ ಸಾಧನೆಯ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದು, ಒಂದು ವೇಳೆ ಮುಂದಿನ ಪಂದ್ಯದಲ್ಲಿ 23 ರನ್ ಗಳಿಸಿದರೇ 251 ಪಂದ್ಯಗಳ 242 ಇನ್ನಿಂಗ್ಸ್ ನಲ್ಲಿ 12 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದಂತಾಗುತ್ತದೆ. ಆ ಮೂಲಕ ಸಾಧನೆ ಮಾಡಿದವರ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರುತ್ತಾರೆ.
ಇದನ್ನೂ ಓದಿ: ಮತ್ತೂಂದು ಪ್ಯಾನ್ ಇಂಡಿಯಾ ಸಿನಿಮಾದತ್ತ ಹೊಂಬಾಳೆ ಫಿಲಂಸ್
ಇದು ಮಾತ್ರವಲ್ಲದೆ ಆಸೀಸ್ ವಿರುದ್ಧ ಮುಂದಿನ ಪಂದ್ಯದಲ್ಲಿ ಶತಕ ದಾಖಲಿಸಿದರೇ, ಸಚಿನ್ ನಂತರ ಕಾಂಗರೂ ಪಡೆಗಳ ವಿರುದ್ಧ ಅತೀ ಹೆಚ್ಚು ಶತಕ ದಾಖಲಿಸಿದ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444