ಕ್ಲೈಮ್ಯಾಕ್ಸ್ ಕದನ: ಮತ್ತೆ ಟಾಸ್ ಗೆದ್ದ ಆಸೀಸ್ ತಂಡದಲ್ಲಿ ಪ್ರಮುಖ ಒಂದು ಬದಲಾವಣೆ

Team Udayavani, Jan 19, 2020, 1:02 PM IST

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಕದನಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದ್ದರೆ, ಎರಡನೇ ಪಂದ್ಯದಲ್ಲಿ ಭಾರತ ಸರಿಯಾದ ತಿರುಗೇಟು ನೀಡಿತ್ತು. ಈ ಮೂಲಕ ಸರಣಿ ನಿರ್ಧರಿಸುವ ನಿರ್ಣಾಯಕ ಪಂದ್ಯಕ್ಕೆ ಬೆಂಗಳೂರು ಸಾಕ್ಷಿಯಾಗಿದೆ.

ಅಂತಿಮ ಕದನಕ್ಕೆ ಭಾರತ ತಂಡ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ರಾಜ್ ಕೋಟ್ ಪಂದ್ಯವಾಡಿದ ತಂಡವೇ ಇಲ್ಲಿಯೂ ಕಣಕ್ಕಿಳಿದಿದೆ

ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು, ವೇಗಿ ರಿಚರ್ಡ್ ಸನ್ ಬದಲಿಗೆ ಜೋಶ್ ಹ್ಯಾಝಲ್ ವುಡ್ ಸ್ಥಾನ ಪಡೆದಿದ್ದಾರೆ.

ತಂಡಗಳು:

ಭಾರತ: ವಿರಾಟ್ ಕೊಹ್ಲಿ, ಶಿಖರ್ ಧವನ್, ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಮನೀಶ್ ಪಾಂಡೆ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಆಶ್ಟನ್ ಟರ್ನರ್, ಆಶ್ಟನ್ ಆಗರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ ವುಡ್, ಆಡಂ ಜಂಪಾ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ