ಭಾರತ-ಲಂಕಾ ಗುವಾಹಾಟಿ ಪಂದ್ಯಕ್ಕೆ ಆತಂಕ

Team Udayavani, Dec 14, 2019, 11:09 PM IST

BCCI-a

ಗುವಾಹಾಟಿ: “ಪೌರತ್ವ ಕಾಯ್ದೆ’ಯನ್ನು ವಿರೋಧಿಸುತ್ತಿರುವ ಈಶಾನ್ಯ ರಾಜ್ಯಗಳಲ್ಲಿ ಗಲಭೆಯಿನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇದು ಇಲ್ಲಿ ನಡೆಯಬೇಕಿದ್ದ ಅನೇಕ ಕ್ರೀಡಾಕೂಟಗಳಿಗೂ ಅಡ್ಡಿಯಾಗಿ ಪರಿಣಮಿಸಿದೆ. ಇದರಿಂದ 2020ರ ಜನವರಿಯಲ್ಲಿ ಅಸ್ಸಾಂ ರಾಜಧಾನಿ ಗುವಾಹಾಟಿಯಲ್ಲಿ ನಡೆಯಲಿರುವ ಭಾರತ-ಶ್ರೀಲಂಕಾ ನಡುವಿನ ಆರಂಭಿಕ ಟಿ20 ಪಂದ್ಯಕ್ಕೂ ಆತಂಕ ಎದುರಾಗುವ ಭೀತಿ ಎದುರಾಗಿದೆ.

ಗುವಾಹಾಟಿಯಲ್ಲಿ ಪಂದ್ಯ ಆಯೋಜಿಸಲು ಸಾಧ್ಯವೇ ಎಂಬ ಬಗ್ಗೆ ಈಗಿಂದಲೇ ಬಿಸಿಸಿಐ ಮತ್ತು ಅಸ್ಸಾಮ್‌ ಕ್ರಿಕೆಟ್‌ ಮಂಡಳಿ (ಎಸಿಎ) ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿವೆ ಎಂಬುದಾಗಿ ಎಸಿಎ ಉಪಾಧ್ಯಕ್ಷ ಪರೀಕ್ಷಿತ್‌ ದತ್ತ ಹೇಳಿದ್ದಾರೆ.
“ಪಂದ್ಯ ನಡೆಯಲು ಇನ್ನೂ 3 ವಾರವಿದೆ. ಹೀಗಾಗಿ ನಾವು ಪರಿಸ್ಥಿತಿಯನ್ನು ಕಾದು ನೋಡುತ್ತೇವೆ. ಪಂದ್ಯ ನಡೆದೀತೆಂಬ ವಿಶ್ವಾಸ ನಮ್ಮದು’ ಎಂಬುದಾಗಿ ದತ್ತ ಹೇಳಿದರು.
ಪ್ರತಿಭಟನೆಯಿಂದಾಗಿ ಗುವಾಹಾಟಿಯಲ್ಲಿ ನಡೆಯ ಬೇಕಿದ್ದ ಅಸ್ಸಾಮ್‌-ಸರ್ವಿಸಸ್‌ ನಡುವಿನ ರಣಜಿ ಪಂದ್ಯದ ಅಂತಿಮ ದಿನದಾಟ ರದ್ದುಗೊಂಡಿತ್ತು. ಅಸ್ಸಾಮ್‌-ಒಡಿಶಾ ನಡುವಿನ ಅಂಡರ್‌-19 ಕೂಚ್‌ ಬೆಹಾರ್‌ ಪಂದ್ಯವನ್ನು ರದ್ದುಗೊಳಿಸಲಾಯಿತು. ಡಿ. 17ರಿಂದ ಅಸ್ಸಾಮ್‌-ಜಾರ್ಖಂಡ್‌ ನಡುವೆ ರಣಜಿ ಪಂದ್ಯ ನಡೆಯುವುದು ಕೂಡ ಸಂಶಯವೆನಿಸಿದೆ. ಒಂದು ವೇಳೆ ಗುವಾಹಾಟಿಯಲ್ಲಿ ಆಟ ಸಾಧ್ಯವಿಲ್ಲವೆನಿಸಿದರೆ, ಕೂಡಲೇ ಪಂದ್ಯ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

ಪೊಲೀಸ್‌ ಭದ್ರತೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಾರ್ಖಂಡ್‌ ನಾಯಕ ಸೌರಭ್‌ ತಿವಾರಿ, “ಸದ್ಯ ನಾವು ಅಗರ್ತಲಾದಲ್ಲಿ ಪೊಲೀಸ್‌ ಭದ್ರತೆಯಲ್ಲಿದ್ದೇವೆ. ಇಲ್ಲಿಂದ ಕೋಲ್ಕತಾಕ್ಕೆ ಪ್ರಯಾಣಿಸಿ, ಅಲ್ಲಿ ಒಂದು ದಿನ ಕಾಯುವಂತೆ ನಮಗೆ ಸೂಚಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾವು ಅಸ್ಸಾಮ್‌ ವಿರುದ್ಧ ಎಲ್ಲಿ ಆಡುತ್ತೇವೆ ಎಂದು ಗೊತ್ತಿಲ್ಲ. ಅಲ್ಲದೇ ಅಂತರ್ಜಾಲ ಸಂಪರ್ಕ ರದ್ದಾಗಿರುವುದರಿಂದ ನಮಗೆ ಪರಿಸ್ಥಿತಿಯ ಅಂದಾಜು ಸಿಗುತ್ತಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.