ಟಿ20 ಸೆಣೆಸಾಟ : ರಾಹುಲ್, ಅಯ್ಯರ್ ಬ್ಯಾಟಿಂಗ್ ಆರ್ಭಟದಲ್ಲಿ ಕಿವೀಸ್ ಮಣಿಸಿದ ಭಾರತ

Team Udayavani, Jan 24, 2020, 3:50 PM IST

ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ.

ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು ಬೆನ್ನತ್ತಿದ್ದ ಭಾರತ ಕೆ.ಎಲ್. ರಾಹುಲ್ (56), ಶ್ರೇಯಸ್ ಅಯ್ಯರ್ (ಅಜೇಯ 58) ಅವರ ಭರ್ಜರಿ ಅರ್ಧಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ (45) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 06 ವಿಕೆಟ್ ಗಳ ಗೆಲುವನ್ನು ತನ್ನದಾಗಿಸಿಕೊಂಡಿತು. 19 ಓವರ್ ಗಳಲ್ಲಿ ಭಾರತ ಗೆಲುವಿನ ಗುರಿ ಮುಟ್ಟಿತು.

ಇದಕ್ಕೂ ಮೊದಲು ಟಾಸ್ ಗೆದ್ದ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡನ್ನು ಬ್ಯಾಟಿಂಗ್ ಗೆ ಇಳಿಸಿದರು. ಕಾಲಿನ್ ಮನ್ರೋ (59), ನಾಯಕ ಕೇನ್ ವಿಲಿಯಮ್ಸನ್ (26 ಎಸೆತೆಗಳಲ್ಲಿ 51) ಮತ್ತು ಇನ್ನಿಂಗ್ಸ್ ನ ಕೊನೆಯಲ್ಲಿ ಅನುಭವಿ ರಾಸ್ ಟಯ್ಲರ್ (27 ಎಸೆತಗಳಲ್ಲಿ ಅಜೇಯ 54) ಅವರ ಸ್ಪೋಟಕ ಆಟದ ನೆರವಿನಿಂದ ನ್ಯೂಝಿಲ್ಯಾಂಡ್ ನಿಗದಿತ 20 ಓವರುಗಳಲ್ಲಿ 05 ವಿಕೆಟ್ ಗಳನ್ನು ಕಳೆದುಕೊಂಡು 203 ರನ್ ಗಳನ್ನು ಕಲೆ ಹಾಕಿತು.

ಈ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತಕ್ಕೆ ಉತ್ತಮ ಆರಂಭವೇನೂ ಲಭಿಸಲಿಲ್ಲ. ತಂಡದ ಮೊತ್ತ 16 ಆಗುವಷ್ಟರಲ್ಲಿ ರೋಹಿತ್ ಶರ್ಮಾ 07 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ರಾಹುಲ್ ಜೊತೆಯಾದ ವಿರಾಟ್ ಕೊಹ್ಲಿ ಕಿವೀಸ್ ಬೌಲರ್ ಗಳನ್ನು ದಂಡಿಸುತ್ತಾ ತಂಡದ ಮೊತ್ತವನ್ನು ಏರಿಸುವ ಜೊತೆಯಾಟವನ್ನು ಕಟ್ಟಿದರು. ಎರಡನೇ ವಿಕೆಟಿಗೆ ಈ ಜೋಡಿ 99 ರನ್ ಗಳನ್ನು ಕಲೆಹಾಕುವ ಮೂಲಕ ಗೆಲುವಿನ ಬುನಾದಿಯನ್ನು ಕಟ್ಟಿಕೊಟ್ಟರು.

ಈ ಸಂದರ್ಭದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಕೆ.ಎಲ್. ರಾಹುಲ್ ಅವರು 56 ರನ್ ಗಳಿಸಿ ಔಟಾದರು. ಇವರು ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ 56 ರನ್ ಸಿಡಿಸಿದ್ದು ವಿಶೇಷವಾಗಿತ್ತು.

ರಾಹುಲ್ ಬೆನ್ನಲ್ಲೇ ವಿರಾಟ್ ಕೊಹ್ಲಿ 45 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ತಂಡದ ಗೆಲುವಿಗೆ 80ಕ್ಕೂ ಹೆಚ್ಚು ರನ್ ಗಳ ಅಗತ್ಯವಿತ್ತು ಬಾಕಿ ಇದ್ದಿದ್ದು 9 ಓವರ್ ಗಳು ಮಾತ್ರ. ಈ ಹಂತದಲ್ಲಿ ಶ್ರೇಯಸ್ ಅಯ್ಯರ್ ಅವರು ಏಕಾಂಗಿ ಹೋರಾಟ ನಡೆಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇವರಿಗೆ ಶಿವಂ ದುಬೆ (13) ಮತ್ತು ಮನೀಶ್ ಪಾಂಡೆ (ಅಜೇಯ 14) ಅವರಿಂದ ಉತ್ತಮ ಬೆಂಬಲ ಲಭಿಸಿತು.

ಭಾರತವನ್ನು ಗೆಲುವಿನ ದಡ ಮುಟ್ಟಿಸಿದ ಶ್ರೇಯಸ್ ಅಯ್ಯರ್ ಅವರು ಕೇವಲ 29 ಎಸೆತಗಳಲ್ಲಿ 58 ರನ್ ಬಾರಿಸಿ ಅಜೇಯರಾಗಿ ಉಳಿದರು. ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹ ಒಳಗೊಂಡಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ