ಗೆಲುವಿನ ಬಳಿಕ ಭಾರತ ಕ್ರಿಕೆಟಿಗರ ಭರ್ಜರಿ ಭೋಜನ
Team Udayavani, Feb 20, 2018, 6:15 AM IST
ಜೊಹಾನ್ಸ್ಬರ್ಗ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದ ಗೆಲುವಿನ ಬಳಿಕ ಭಾರತ ಆಟಗಾರರು ಭರ್ಜರಿ ಪಾರ್ಟಿ ಮಾಡಿದರು.
ಗೆಲುವಿನ ಸಂಭ್ರಮವನ್ನು ಆಚರಿಸಿಕೊಂಡಿರುವುದನ್ನು ಸುರೇಶ್ ರೈನಾ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಅಷ್ಟೇ ಅಲ್ಲ “ಪ್ರಚಂಡ ಗೆಲುವನ್ನು ಆಚರಿಸುವುದಕ್ಕೆ ಒಂದೊಳ್ಳೆ ಖುಷಿ ಸಾಕು..ಡಿನ್ನರ್ ಟೈಮ್ ವಿತ್ ದಿ ಬಾಯ್ಸ??’ ಎಂದು ರೈನಾ ಪ್ರಕಟಣೆಯಲ್ಲಿ ಬರೆದುಕೊಂಡಿದ್ದಾರೆ.
ಇದೇ ಫೋಟೋವನ್ನು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ತಮ್ಮ ಟ್ವೀಟರ್ ಖಾತೆಯಿಂದ ಪ್ರಕಟಸಿದ್ದಾರೆ. ಗೆಲುವಿನ ನಂತರ ನಮ್ಮ ಆಟಗಾರರೊಂದಿಗೆ ರಾತ್ರಿಯ ಊಟ ಮಾಡಿದೆ’ ಎಂದು ಕೊಹ್ಲಿ ಬರೆದುಕೊಂಡಿದ್ದಾರೆ. ಭಾರತ ಆರಂಭದ ಟೆಸ್ಟ್ ಪಂದ್ಯವನ್ನು ಸೋತರೂ ಬಳಿಕ ಎಚ್ಚೆತ್ತು ಟೆಸ್ಟ್ ಸರಣಿಯನ್ನು ಗೆದ್ದಿತ್ತು. ಬಳಿಕ ಏಕದಿನ ಸರಣಿಯನ್ನು ಬೃಹತ್ ಅಂತರದಿಂದ ಗೆದ್ದಿತ್ತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟಿಗರು ಅಮೋಘ ಆಟ ಪ್ರದರ್ಶಿಸಿದ್ದಾರೆ. ತವರಿನಲ್ಲಿ ಹುಲಿಗಳು ವಿದೇಶಿ ಪಿಚ್ನಲ್ಲಿ ಕಾಗದದ ಹುಲಿಗಳು ಎಂದು ಟೀಕೆ ಮಾಡುತ್ತಿದ್ದ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ