ಅಫ್ಘಾನ್ ಏಕೈಕ ಟೆಸ್ಟ್ ಪಂದ್ಯಕ್ಕೆ ಸಾಹಾ ಬದಲು ದಿನೇಶ್ ಕಾರ್ತಿಕ್
Team Udayavani, Jun 2, 2018, 3:55 PM IST
ಮುಂಬಯಿ : ಇದೇ ಜೂನ್ 14ರಿಂದ ಬೆಂಗಳೂರಿನಲ್ಲಿ ಅಫ್ಘಾನಿಸ್ಥಾನದ ವಿರುದ್ಧ ನಡೆಯುವ ಏಕೈಕ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಭಾರತದ ಭರವಸೆಯ ಕ್ರಿಕೆಟಿಗ ವೃದ್ಧಿಮಾನ್ ಸಾಹಾ ಅವರು ಅಲಭ್ಯರಾಗಿದ್ದಾರೆ. ಅವರ ಹೆಬ್ಬೆರಳಿಗೆ ಆಗಿರುವ ಗಾಯ ಗುಣವಾಗಲು ಆರು ವಾರಗಳು ಬೇಕಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಬಿಸಿಸಿಐ ಇಂದು ಶುಕ್ರವಾರ ಹೇಳಿದೆ.
ಮೇ 25 ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಎದುರು ಆಡುವಾಗ ಸನ್ ರೈಸರ್ಸ್ ಹೈದರಾಬಾದ್ ತಂಡದ 33ರ ಹರೆಯದ ಕ್ರಿಕೆಟಿಗ ಸಾಹಾ ಅವರ ಹೆಬ್ಬೆರಳಿಗೆ ಗಾಯವಾಗಿತ್ತು.
ಜೂನ್ 14ರಿಂದ ಬೆಂಗಳೂರಿನಲ್ಲಿ ನಡೆಯುವ ಅಫ್ಘಾನಿಸ್ಥಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಈಗಿನ್ನು ಸಾಹಾ ಅವರ ಸ್ಥಾನದಲ್ಲಿ ದಿನೇಶ್ ಕಾರ್ತಿಕ್ ಆಡಲಿದ್ದಾರೆ.
ಕಳೆದ ವರ್ಷ ಜೂನ್ ನಲ್ಲಿ ಅಯರ್ಲಂಡ್ ಜತೆಗೆ ಟೆಸ್ಟ್ ಕ್ರಿಕೆಟ್ ಪೂರ್ಣ ಸ್ಥಾನಮಾನ ನೀಡಲಾಗಿರುವ ಅಫ್ಘಾನಿಸ್ಥಾನಕ್ಕೆ ಭಾರತದ ಎದುರಿನ ಈ ಐದು ದಿನಗಳ ಪಂದ್ಯ ಚೊಚ್ಚಲ ಟೆಸ್ಟ್ ಪಂದ್ಯ ಆಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ