
INDvsAUS; ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಐದು ಬದಲಾವಣೆ
Team Udayavani, Sep 22, 2023, 1:05 PM IST

ಮೊಹಾಲಿ: ವಿಶ್ವಕಪ್ ಗೆ ಮುನ್ನ ಕೊನೆಯ ಸರಣಿಯಾದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊಹಾಲಿಯಲ್ಲಿ ಆರಂಭವಾಗಿದೆ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದೆ.
ಭಾರತ ತಂಡವು ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ. ರೋಹಿತ್, ವಿರಾಟ್, ಹಾರ್ದಿಕ್ ಪಾಂಡ್ಯ ರೆಸ್ಟ್ ಇರುವ ಕಾರಣ ಕೆಎಲ್ ರಾಹುಲ್ ತಂಡ ಮುನ್ನಡೆಸುತ್ತಿದ್ದಾರೆ.
ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆಡಿದ ತಂಡಕ್ಕಿಂತ ಈ ತಂಡದಲ್ಲಿ ಐದು ಬದಲಾವಣೆ ಮಾಡಲಾಗಿದೆ. ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವಿ ಅಶ್ವಿನ್ ಮತ್ತು ಮೊಹಮ್ಮದ್ ಶಮಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ರವಿ ಅಶ್ವಿನ್ ಅವರು ಒಂದು ವರ್ಷದ ಬಳಿಕ ಏಕದಿನ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ತಂಡಗಳು
ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿ.ಕೀ), ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್ (ನಾ), ಸೀನ್ ಅಬಾಟ್, ಆಡಮ್ ಝಂಪಾ
ಭಾರತ: ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾ/ವಿ.ಕೀ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ
ಟಾಪ್ ನ್ಯೂಸ್
