ಮಹಿಳಾ ಐಪಿಎಲ್‌ ಆರಂಭ ಆಶಾದಾಯಕ ಬೆಳವಣಿಗೆ

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕಿ ಮಮತಾ ಮಾಬೆನ್‌ ಸಂದರ್ಶನ

Team Udayavani, Jan 26, 2023, 7:35 AM IST

ಮಹಿಳಾ ಐಪಿಎಲ್‌ ಆರಂಭ ಆಶಾದಾಯಕ ಬೆಳವಣಿಗೆ

“ಮಹಿಳಾ ಐಪಿಎಲ್‌ ಆರಂಭಿಸುವುದು ಕ್ರಿಕೆಟ್‌ನ ಅಭಿವೃದ್ಧಿಯ ದೃಷ್ಟಿಯಲ್ಲಿ ಅತ್ಯುತ್ತಮ ಬೆಳವಣಿಗೆ. ಎಲ್ಲವೂ ವಾಣಿಜ್ಯೀಕರಣದತ್ತ ಸಾಗುವಾಗ ಮಹಿಳಾ ಕ್ರಿಕೆಟ್‌ ಕೂಡ ಒಂದು ಉತ್ಪನ್ನವಾಗಿ ಮಾರುಕಟ್ಟೆಗೆ ತೆರೆದುಕೊಂಡಿರುವುದು ಅತೀ ಮಹತ್ವದ್ದು’ ಎಂಬುದು ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ಮಾಜಿ ನಾಯಕಿ, ಮೂಲತಃ ಮಂಗಳೂರಿನವರಾದ ಮಮತಾ ಮಾಬೆನ್‌ ಅಭಿಮತ.

1993ರ ವಿಶ್ವಕಪ್‌ನಲ್ಲಿ ಮಹಿಳಾ ತಂಡವನ್ನು ಪ್ರತಿನಿಧಿಸಿದ್ದ ಮಮತಾ ಮಾಬೆನ್‌, 1993ರಿಂದ 2004ರ ನಡುವೆ 4 ಟೆಸ್ಟ್‌, 40 ಏಕದಿನ ಪಂದ್ಯ ಗಳನ್ನು ಆಡಿದ್ದಾರೆ. 2003-04ರಲ್ಲಿ ತಂಡದ ನಾಯಕಿಯಾದರು. ನಿವೃತ್ತಿಯ ಬಳಿಕ ಬಾಂಗ್ಲಾದೇಶ ಮತ್ತು ಚೀನ ಮಹಿಳಾ ಕ್ರಿಕೆಟ್‌ ತಂಡಗಳ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಮಂಗಳೂರಿನ ಬಲ್ಮಠದಲ್ಲಿರುವ ತವರು ಮನೆಗೆ ಭೇಟಿ ನೀಡಿದ್ದ ಅವರು “ಉದಯವಾಣಿ’ ಜತೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಮಹಿಳಾ ಐಪಿಎಲ್‌ ಇಂದಿನ ಅಗತ್ಯ
“ಇಂದು ಕ್ರೀಡೆಗಳು ಮಾರುಕಟ್ಟೆಯಲ್ಲಿ ಉತ್ಪನ್ನಗಳಾಗಿ ಮಹತ್ವ ಪಡೆಯುತ್ತಿವೆ. ಮಹಿಳಾ ಕ್ರಿಕೆಟಿಗರಿಗೆ ಈ ಅವಕಾಶ ತಡವಾಗಿ ಯಾದರೂ ಸಿಗುತ್ತಿರುವುದು ಕ್ರೀಡೆಯ ಬೆಳ ವಣಿಗೆಯಲ್ಲಿ ಆಶಾದಾಯಕ ಬೆಳವಣಿಗೆ. ಮಹಿಳೆಯರ ಕ್ರೀಡೆಗಳಿಗೆ ಸಂಬಂಧಿಸಿ ಬಾಸ್ಕೆಟ್‌ ಬಾಲ್‌ ಬಳಿಕ ದ್ವಿತೀಯ ಶ್ರೀಮಂತ ಲೀಗ್‌ ಆಗಿ ಮಹಿಳಾ ಐಪಿಎಲ್‌ ಗುರುತಿಸಿಕೊಳ್ಳಲಿದೆ. ಇದು ಇಂದಿನ ಅಗತ್ಯವೂ ಆಗಿದೆ’.

ನಂ.1 ತಂಡವಾಗುವ ಭರವಸೆ
“ಭಾರತೀಯ ಮಹಿಳಾ ಕ್ರಿಕೆಟ್‌ ತಂಡ ಸದ್ಯ ವಿಶ್ವ ರ್‍ಯಾಂಕಿಂಗ್‌ನಲ್ಲಿ 4ನೇ ಸ್ಥಾನ ದಲ್ಲಿದೆ. ನಂ.1 ಆಗುವ ಎಲ್ಲ ಸಾಮರ್ಥ್ಯ ಹೊಂದಿದೆ. ಶೀಘ್ರದಲ್ಲೇ ಆ ಸ್ಥಾನದಲ್ಲಿರುವ ಭರವಸೆ ನನಗಿದೆ’.

“ನಾವು ಆಡುತ್ತಿದ್ದ ಕಾಲದಲ್ಲಿದ್ದ ಮೂಲಭೂತ ಸೌಲಭ್ಯಗಳನ್ನು ಹೋಲಿಸಿದರೆ ಈಗ ಕ್ರಿಕೆಟಿಗರಿಗೆ ಸಿಗುತ್ತಿರುವ ಸೌಲಭ್ಯಗಳ ಪ್ರಮಾಣ ಅಗಾಧ. ಹಿಂದೆ ಟಿ20 ಇರಲಿಲ್ಲ. ಈಗಿನಂತೆ ಕ್ರಿಕೆಟಿಗರಿಗೆ ಎಕ್ಸ್‌ಪೋಶರ್‌ ಸಿಗುತ್ತಿರಲಿಲ್ಲ. ಈಗ ಎಲ್ಲವೂ ಬದ ಲಾಗಿದೆ. ಅತ್ಯುತ್ತಮ ತರಬೇತುದಾರೂ ಸಿಗುತ್ತಿದ್ದಾರೆ’.

ಗ್ರಾಮಾಂತರದಲ್ಲೂ ಬೆಳೆಯಬೇಕು
“ಕ್ರಿಕೆಟ್‌ ಗ್ರಾಮಾಂತರ ಮಟ್ಟದಲ್ಲಿಯೂ ಹೆಚ್ಚಿನ ಉತ್ತೇಜನ ಪಡೆದುಕೊಳ್ಳಬೇಕು. ನಗರ ಕೇಂದ್ರೀಕೃತವಾಗಿ ಕ್ರಿಕೆಟ್‌ ಬಹಳಷ್ಟು ಬೆಳೆದಿದೆ. ಗ್ರಾಮೀಣ ಮಟ್ಟದಲ್ಲಿ ಸೂಕ್ತ ತರಬೇತಿ, ಮಾರ್ಗದರ್ಶನ ದೊರಕಿದಾಗ ಇನ್ನಷ್ಟು ಮಹಿಳಾ ಕ್ರಿಕೆಟ್‌ ಪ್ರತಿಭೆಗಳು ಬೆಳಕಿಗೆ ಬರಲು ಸಾಧ್ಯವಾಗಲಿದೆ. ಈ ಕಾರ್ಯ ಆಗಬೇಕಾಗಿದೆ’.

ಕ್ರೀಡೆಯಿಂದ
ಮಾನಸಿಕ ದೃಢತೆ
“ಈಗಿನ ಅಂಕ ಗಳಿಕೆಯ ಜಿದ್ದಿನಲ್ಲಿ ವಿಫ‌ಲರಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಯುವಜನರು ಆತ್ಮಹತ್ಯೆಯ ಹಾದಿ ತುಳಿಯುತ್ತಿರುವುದು ಹೆಚ್ಚುತ್ತಿದೆ. ಆದರೆ ಕ್ರೀಡೆಗಳಲ್ಲಿ ತೊಡಗಿಕೊಂಡವರಲ್ಲಿ ಇಂತಹ ಪರಿಸ್ಥಿತಿ ಸೃಷ್ಟಿಯಾಗದು. ಕ್ರೀಡೆ ನಮ್ಮಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ. ಸವಾಲನ್ನು ಎದುರಿಸಲು ಮಾನಸಿಕ, ದೈಹಿಕ ದೃಢತೆ ಒದಗಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಸೆôರ್ಯ ಬೆಳೆಸುತ್ತದೆ. ಕ್ರೀಡೆಯನ್ನೇ ವೃತ್ತಿಯನ್ನಾಗಿಸಬೇಕೆಂದು ನಾನು ಹೇಳಲಾರೆ. ಆದರೆ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಸ್ಪರ್ಧಾತ್ಮಕ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದಕ್ಕೆ ಪೋಷಕರೂ ಹೆಚ್ಚಿನ ಗಮನ ಹರಿಸಬೇಕು’ ಎನ್ನುವುದು ಮಮತಾ ಮಾಬೆನ್‌ ಅವರ ಸಲಹೆ.

-ಸತ್ಯಾ ಕೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.