ಗುಜರಾತ್‌ ಲಯನ್ಸ್‌ಗೆ ಕೈಫ್ ಸಹಾಯಕ ಕೋಚ್‌ ಆಗಿ ನೇಮಕ

Team Udayavani, Feb 18, 2017, 3:45 AM IST

ನವದೆಹಲಿ: ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್‌ ಕೈಫ್ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಫ್ರಾಂಚೈಸಿ ಗುಜರಾತ್‌ ಲಯನ್ಸ್‌ ತಂಡಕ್ಕೆ ಸಹಾಯಕ ಕೋಚ್‌ ಆಗಿ ನೇಮಕವಾಗಿದ್ದಾರೆ.

ಪ್ರಸಕ್ತ ವರ್ಷದ ಐಪಿಎಲ್‌ ಟೂರ್ನಿ ಏ.5 ರಿಂದ ಆರಂಭವಾಗಲಿದೆ. ಬ್ರಾಡ್‌ ಹಾಗ್‌ ಮುಖ್ಯಕೋಚ್‌ ಆಗಿದ್ದಾರೆ. ಇದೇ ಮೊದಲ ಬಾರಿಗೆ ಕೈಫ್ ಸಹಾಯಕ ಕೋಚ್‌ ಆಗಿ ಆಯ್ಕೆಯಾಗಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ನನ್ನ ಹೊಸ ಸವಾಲನ್ನು ಎದುರು ನೋಡುತ್ತಿದ್ದೇನೆ. ಇದೊಂದು ಅದ್ಭುತ ಅವಕಾಶವಾಗಿದೆ. ಸುರೇಶ್‌ ರೈನಾ, ರವೀಂದ್ರ ಜಡೇಜಾ, ಬ್ರಾವೋ ಸೇರಿದಂತೆ ಹಲವರು ಪ್ರಬಲ ಆಟಗಾರರು ಇದ್ದಾರೆ. ಇವರೆಲ್ಲರ ಜತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ಕೈಫ್ ತಿಳಿಸಿದ್ದಾರೆ.

ಕೈಫ್ ಭಾರತ ತಂಡದ ಪರ 13 ಟೆಸ್ಟ್‌, 125 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌, ಕಿಂಗ್ಸ್‌ ಇಲೆವನ್‌ ಪಂಜಾಬ್‌, ರಾಯಲ್‌ ಚಾಲೆಂಜರ್ ಬೆಂಗಳೂರು ತಂಡದಲ್ಲಿ ಆಡಿದ ಅನುಭವ ಹೊಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ