ಹರ್ಷ ಗೊಯೆಂಕಾ ಮೇಲೆ ಧೋನಿ ಅಭಿಮಾನಿಗಳ ಬೌನ್ಸರ್
Team Udayavani, May 18, 2017, 3:45 AM IST
ಪುಣೆ: ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳು ರೈಸಿಂಗ್ ಪುಣೆ ಸೂಪರ್ಜೈಂಟ್ ಮಾಲಕನ ಸಹೋದರ ಹರ್ಷ ಗೊಯೆಂಕಾ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಧೋನಿಯನ್ನು ಗೌರವಿಸುವುದನ್ನು ಕಲಿಯಿರಿ, ನಾವು ಪುಣೆಯನ್ನು ಬೆಂಬಲಿಸುತ್ತಿರುವುದು ಧೋನಿಗಾಗಿ ಹೊರತು ನಿಮಗಾಗಿ ಅಲ್ಲ ಎಂದು ಅಭಿಮಾನಿಗಳು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.
ಈ ಬಾರಿಯ ಐಪಿಎಲ್ನ ಮೊದಲ ಪಂದ್ಯದಲ್ಲೇ ನಾಯಕ ಸ್ಟೀವನ್ ಸ್ಮಿತ್ ನೆರವಿನಿಂದ ಪುಣೆ ಗೆದ್ದಿತ್ತು. ಆಗ ಸ್ಮಿತ್ ಅವರನ್ನು ಹೊಗಳಿದ್ದ ಹರ್ಷ, ಮಾಜಿ ನಾಯಕ ಧೋನಿಯನ್ನು ತೆಗಳಿದ್ದರು. ಅಲ್ಲಿಂದ ಶುರುವಾಗಿರುವ ಚಕಮಕಿ ಇನ್ನೂ ನಿಂತಿಲ್ಲ.
ಇದಕ್ಕೆಲ್ಲ ಕಾರಣವಾಗಿದ್ದು ಪುಣೆ-ಮುಂಬೈ 1ನೇ ಕ್ವಾಲಿಫಯರ್ ಪಂದ್ಯ. ಈ ಪಂದ್ಯದಲ್ಲಿ ಮುಂಬೈಯನ್ನು ಸೋಲಿಸಿ ಪುಣೆ ಫೈನಲ್ಗೇರಿದೆ. ಇದರಲ್ಲಿ ಧೋನಿಯ ಸ್ಫೋಟಕ ಬ್ಯಾಟಿಂಗ್ ನಿರ್ಣಾಯಕ ಪಾತ್ರ ವಹಿಸಿತ್ತು. ಧೋನಿ ಅವರ ಅದ್ಭುತ ಬ್ಯಾಟಿಂಗ್ ನೋಡಿದ ಹರ್ಷ ಗೊಯೆಂಕಾ ಎದ್ದು ನಿಂತು ಗೌರವ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ. ಆರಂಭಿಕ ಹಂತದಲ್ಲಿ ಬೈದು ಈಗ ಹೊಗಳುತ್ತಿರುವ ಅವರ ನಡೆ ಧೋನಿ ಅಭಿಮಾನಿಗಳಿಗೆ ಸಿಟ್ಟು ತರಿಸಿದ್ದು, ಟೀಕೆಗಳ ಸುರಿಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ