ಶ್ರೇಯಸ್ ಆಟಕ್ಕೆ ಸಚಿನ್ ಪ್ರಶಂಸೆ
Team Udayavani, May 12, 2017, 12:30 AM IST
ಮುಂಬಯಿ: ಗುಜರಾತ್ ಲಯನ್ಸ್ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಡೆಲ್ಲಿ ಗೆಲುವಿನ ಹೀರೋ ಆಗಿ ಮೂಡಿಬಂದ ಶ್ರೇಯಸ್ ಅಯ್ಯರ್ ಆಟ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ಪ್ರಶಂಸೆಗೆ ಪಾತ್ರವಾಗಿದೆ. ಅಯ್ಯರ್ ಅವರಿಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
‘ಕಳೆದ ರಾತ್ರಿ ಶ್ರೇಯಸ್ ಅಯ್ಯರ್ ಅತ್ಯದ್ಭುತ ಇನ್ನಿಂಗ್ಸ್ ಒಂದನ್ನು ಪ್ರದರ್ಶಿಸಿದರು. ಅವರಿಗೆ ಅಭಿನಂದನೆಗಳು. ಈ ಐಪಿಎಲ್ನಲ್ಲಿ ಭಾರತದ ಸಾಕಷ್ಟು ಮಂದಿ ಯುವ ಪ್ರತಿಭೆಗಳು ಬೆಳಕಿಗೆ ಬಂದಿವೆ…’ ಎಂದು ತೆಂಡುಲ್ಕರ್ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ರಿಷಬ್ ಪಂತ್ ಆಟವನ್ನೂ ಪ್ರಶಂಸಿಸಿ ‘ಇದು ನಾನು ಐಪಿಎಲ್ನಲ್ಲಿ ಕಂಡ ಸರ್ವಶ್ರೇಷ್ಠ ಇನ್ನಿಂಗ್ಸ್ಗಳಲ್ಲಿ ಒಂದು…’ ಎಂದು ಸಚಿನ್ ಟ್ವೀಟ್ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಸಚಿನ್ ತೆಂಡುಲ್ಕರ್ ಐಪಿಎಲ್ ಪಂದ್ಯಾವಳಿಯನ್ನು ಎಷ್ಟೊಂದು ಆಸಕ್ತಿಯಿಂದ ಗಮನಿಸುತ್ತಿದ್ದಾರೆ ಎಂಬುದಕ್ಕೆ ಈ ಪ್ರಶಂಸೆಗಳೇ ಸಾಕ್ಷಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ