ಅರ್ಧಕ್ಕೆ ಇಳಿದ ಐಪಿಎಲ್ ಪ್ರಶಸ್ತಿ ಮೊತ್ತ:ತಂಡದ ಮಾಲಕರಿಗೆ ಭಾರೀ ಶಾಕ್
Team Udayavani, Mar 5, 2020, 6:30 AM IST
ಹೊಸದಿಲ್ಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಕೂಟವಾದ ಐಪಿಎಲ್ನ ಬಹುಮಾನ ಮೊತ್ತದಲ್ಲಿ ಭಾರೀ ಕಡಿತವಾಗಿದೆ. ಬುಧವಾರದ ದಿಢೀರ್ ಬೆಳವಣಿಗೆಯೊಂದರಲ್ಲಿ ಇದನ್ನು ಶೇ. 50ರಷ್ಟು ಕಡಿತಗೊಳಿಸಿದ ಬಿಸಿಸಿಐ, ಫ್ರಾಂಚೈಸಿ ಹಾಗೂ ತಂಡದ ಮಾಲಕರಿಗೆ ಭಾರೀ ಶಾಕ್ ನೀಡಿದೆ. ಮಾ. 29ರಿಂದ ಆರಂಭವಾಗಲಿರುವ 13ನೇ ಆವೃತ್ತಿಯಿಂದಲೇ ಇದು ಜಾರಿಗೆ ಬರಲಿದೆ.
ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಸಿಸಿಐ ಈ ದಿಟ್ಟ ಕ್ರಮ ಕೈಗೊಂಡಿದೆ. ಅದರಂತೆ ಈ ಬಾರಿಯ ಐಪಿಎಲ್ ಚಾಂಪಿಯನ್ ತಂಡಕ್ಕೆ 20 ಕೋಟಿ ರೂ. ಬದಲು ಕೇವಲ 10 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ.
ರನ್ನರ್ ಆಫ್ ತಂಡಕ್ಕೆ ನೀಡಲಾಗುತ್ತಿದ್ದ 12.5 ಕೋಟಿ ರೂ. ಬಹುಮಾನವನ್ನು 6.25 ಕೋಟಿ ರೂ.ಗೆ ಇಳಿಸಲಾಗಿದೆ. 3ನೇ ಮತ್ತು 4ನೇ ಸ್ಥಾನ ಪಡೆದ ತಂಡಗಳಿಗೆ 4.3 ಕೋ.ರೂ. ಲಭಿಸಲಿದೆ. ಈ ಹಿಂದೆ 8.75 ಕೋ. ರೂ. ನೀಡಲಾಗುತ್ತಿತ್ತು.
ಬಿಸಿನೆಸ್ ಕ್ಲಾಸ್ ಪ್ರಯಾಣ ಇಲ್ಲ
ಐಪಿಎಲ್ ಪಂದ್ಯಗಳ ವೇಳೆ ಬಿಸಿಸಿಐ ಅಧಿಕಾರಿಗಳಿಗೆ ಒದಗಿಸಲಾಗುತ್ತಿದ್ದ ವಿಮಾನದ ಬಿಸಿನೆಸ್ ಕ್ಲಾಸ್ ಟಿಕೆಟ್ ಪ್ರಯಾಣಕ್ಕೂ ಕತ್ತರಿ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ