ಇಂದು ಕೋಲ್ಕತಾದಲ್ಲಿ ಐಪಿಎಲ್‌ ಹರಾಜು

Team Udayavani, Dec 19, 2019, 5:11 AM IST

ipl

ಕೋಲ್ಕತಾ: 13ನೇ ಆವೃತ್ತಿಯ ಐಪಿಎಲ್‌ಗಾಗಿ ಕ್ರಿಕೆಟಿಗರ ಹರಾಜು ಗುರುವಾರ ಕೋಲ್ಕತಾದಲ್ಲಿ ನಡೆಯಲಿದೆ.

ದೇಶ-ವಿದೇಶದ ಕಿರಿಯ, ಹಿರಿಯ ಕ್ರಿಕೆಟಿಗರು ಹರಾಜಿನ ಪ್ರಮುಖ ಆಕರ್ಷಣೆಯಾಗಿದ್ದಾರೆ. ಒಟ್ಟು 332 ಕ್ರಿಕೆಟಿಗರು ಹರಾಜು ಪಟ್ಟಿಯಲ್ಲಿದ್ದಾರೆ.

186 ಭಾರತೀಯರು, 143 ವಿದೇಶಿ ಹಾಗೂ ಮೂವರು ಸಹಸದಸ್ಯ ರಾಷ್ಟ್ರದವರಾಗಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ ಹಿನ್ನೆಲೆಯಲ್ಲಿ ಐಪಿಎಲ್‌ನಲ್ಲಿ ಆಡುವ ಆಟಗಾರರ ಪ್ರದರ್ಶನದ ಮೇಲೆ ವಿವಿಧ ದೇಶಗಳ ಆಯ್ಕೆ ಮಂಡಳಿ ಕಣ್ಣಿಟ್ಟಿದೆ.

ಯುವ ಕ್ರಿಕೆಟಿಗರಿಗೆ ವೇದಿಕೆ
ಹರಾಜಿನಲ್ಲಿ ಭಾರತೀಯ ಕ್ರಿಕೆಟಿಗರು ಪ್ರಮುಖ ಆಕರ್ಷಣೆಯಾಗಿದ್ದಾರೆ. ದೇಶಿ ಕೂಟಗಳಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದ ಕ್ರಿಕೆಟಿಗರನ್ನು ಈಗಾಗಲೇ ವಿವಿಧ ತಂಡಗಳ ಫ್ರಾಂಚೈಸಿ ಮಾಲಕರು ಗಮನದಲ್ಲಿಟ್ಟುಕೊಂಡಿದ್ದಾರೆ. ಭರವಸೆಯ ಕ್ರಿಕೆಟಿಗರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ.

ಇವರಲ್ಲಿ ಮುಂಬಯಿಯ ಎಡಗೈ ಬ್ಯಾಟ್ಸ್‌ಮನ್‌ ಯಶಸ್ವಿ ಜೈಸ್ವಾಲ್‌, ಅಂಡರ್‌-19 ತಂಡದ ನಾಯಕ ಪ್ರಿಯಂ ಗರ್ಗ್‌ ಪ್ರಮುಖರು. ತಮಿಳುನಾಡು ಸ್ಪಿನ್ನರ್‌ ಆರ್‌. ಸಾಯಿ ಕಿಶೋರ್‌, ಬಂಗಾಲದ ವೇಗಿ ಇಶಾನ್‌ ಪೊರೆಲ್‌ ಕೂಡ ಹರಾಜು ಪಟ್ಟಿಯಲ್ಲಿರುವ ಅಗ್ರ ಯುವ ಕ್ರಿಕೆಟಿಗರು. ಇವರೆಲ್ಲರ ಮೂಲಬೆಲೆ 20 ಲಕ್ಷ ರೂ.

ಆಸೀಸ್‌ ಕ್ರಿಕೆಟಿಗರ ದಂಡು
ಆಸ್ಟ್ರೇಲಿಯ ಕ್ರಿಕೆಟಿಗರ ಮೇಲೆ ವಿವಿಧ ಫ್ರಾಂಚೈಸಿಗಳು ಕಣ್ಣಿಟ್ಟಿವೆ. ಕಮಿನ್ಸ್‌, ಹ್ಯಾಜಲ್‌ವುಡ್‌, ಲಿನ್‌, ಮಿಚೆಲ್‌ ಮಾರ್ಷ್‌, ಮ್ಯಾಕ್ಸ್‌ವೆಲ್‌ ಖರೀದಿಗೆ ಫ್ರಾಂಚೈಸಿಗಳು ಹೆಚ್ಚಿನ ಒಲವು ತೋರಿಸುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾದ ಡೇಲ್‌ ಸ್ಟೇನ್‌, ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್‌ ಹರಾಜಿನಲ್ಲಿರುವ ಪ್ರಮುಖ ತಾರಾ ಕ್ರಿಕೆಟಿಗರು. ಇವರೆಲ್ಲರೂ 2 ಕೋಟಿ ರೂ. ಮೂಲಬೆಲೆ ಹೊಂದಿದ್ದಾರೆ.

ಹೆಟ್‌ಮೈರ್‌ಗೆ ಕೋಟಿ ನಿರೀಕ್ಷೆ
ವಿಂಡೀಸಿನ ಸ್ಫೋಟಕ ಬ್ಯಾಟ್ಸ್‌ಮನ್‌ ಶಿಮ್ರನ್‌ ಹೆಟ್‌ಮೈರ್‌ಗೆ ಬಲೆ ಬೀಸಲು ಫ್ರಾಂಚೈಸಿಗಳಿಂದ ಪೈಪೋಟಿ ನಡೆಯುವ ನಿರೀಕ್ಷೆ ಇದೆ. 22 ವರ್ಷದ ವಿಂಡೀಸ್‌ ಕ್ರಿಕೆಟಿಗ ಕಳೆದ ಆವೃತ್ತಿಯಲ್ಲಿ ಆರ್‌ಸಿಬಿಯಲ್ಲಿದ್ದರು. ಆದರೆ ಕ್ಲಿಕ್‌ ಆಗಿರಲಿಲ್ಲ. ಹೆಟ್‌ಮೈರ್‌ ಮೂಲಬೆಲೆ 50 ಲಕ್ಷ ರೂ. ಈಗಿನ ಫಾರ್ಮ್ ನೋಡಿ ಆರ್‌ಸಿಬಿ ಕೂಡ ಹೆಟ್‌ಮೈರ್‌ ಖರೀದಿಗೆ ಪ್ರಯತ್ನ ನಡೆಸುವ ಸಾಧ್ಯತೆ ಇದೆ. ವಿಂಡೀಸ್‌ ಬೌಲರ್‌ ಕೆಸ್ರಿಕ್‌ ವಿಲಿಯಮ್ಸ್‌ 50 ಲಕ್ಷ ರೂ. ಮೂಲ ಬೆಲೆ ಹೊಂದಿದ್ದು, ಹರಾಜಿನಲ್ಲಿರುವ ಪ್ರಮುಖ ತಾರೆ.

ಕೆಕೆಆರ್‌ ತಂಡದಿಂದ ಹೊರಬಿದ್ದಿರುವ ವಿಕೆಟ್‌ ಕೀಪರ್‌ ಕಮ್‌ ಬ್ಯಾಟ್ಸ್‌ಮನ್‌ ರಾಬಿನ್‌ ಉತ್ತಪ್ಪ ಹರಾಜಿನಲ್ಲಿರುವ ತಾರಾ ಆಟಗಾರರಲ್ಲಿ ಪೈಕಿ ಅಗ್ರ ಸ್ಥಾನದಲ್ಲಿದ್ದಾರೆ.

14 ವರ್ಷದ ಬಾಲಕ ಆಕರ್ಷಣೆ
ಹರಾಜಿನಲ್ಲಿರುವ ಅತ್ಯಂತ ಕಿರಿಯ ವಯಸ್ಸಿನ ಕ್ರಿಕೆಟಿಗರೆಂದರೆ ಅಫ್ಘಾನಿಸ್ಥಾದ ಬಾಲಕ ನೂರ್‌ ಅಹ್ಮದ್‌. ಅವರಿಗೆ ವಯಸ್ಸು ಕೇವಲ 14 ವರ್ಷ, 350 ದಿನ. ಸ್ಪಿನ್‌ ಬೌಲರ್‌ ಆಗಿರುವ ನೂರ್‌ ಅಹ್ಮದ್‌ 30 ಲಕ್ಷ ರೂ. ಮೂಲ ಬೆಲೆ ಹೊಂದಿದ್ದಾರೆ. ಅವರು ಅಂಡರ್‌-19 ಪಂದ್ಯದಲ್ಲಿ ಭಾರತ ವಿರುದ್ಧ 9 ವಿಕೆಟ್‌ ಕಬಳಿಸಿ ಸುದ್ದಿಯಾಗಿದ್ದರು. ಉಳಿದಂತೆ ಅಫ್ಘಾನ್‌ನ ರಶೀದ್‌ ಖಾನ್‌, ಮೊಹಮ್ಮದ್‌ ನಬಿ ಕೂಡ ಹರಾಜಿನಲ್ಲಿರುವ ಹಾಟ್‌ ಫೇವರಿಟ್‌ಗಳಾಗಿದ್ದಾರೆ.

ಟಾಪ್ ನ್ಯೂಸ್

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.