ಚೆನ್ನೈಯಿಂದ ಐಪಿಎಲ್‌ ಔಟ್‌?

Team Udayavani, Apr 12, 2018, 6:00 AM IST

42.jpg

ಹೊಸದಿಲ್ಲಿ: ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಪರಿಣಾಮ ಐಪಿಎಲ್‌ ಪಂದ್ಯಗಳ ಮೇಲೂ ಆಗಿದ್ದು, ಅಗತ್ಯ ಬಿದ್ದರೆ ಚೆನ್ನೈಯಲ್ಲಿ ನಡೆಯಬೇಕಿರುವ ಎಲ್ಲ ಪಂದ್ಯಗಳನ್ನೂ ಸ್ಥಳಾಂತರಿಸಬಹುದೇ ಎಂದು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಕೇಳಿದ್ದು, ಅಂತಿಮ ನಿರ್ಧಾರವನ್ನು ಸ್ಥಳೀಯ ಫ್ರಾಂಚೈಸಿಗೆ ವಹಿಸಿದೆ.

ಮಂಗಳವಾರ ನಡೆದ ಕೋಲ್ಕತಾ ವಿರುದ್ಧದ ಪಂದ್ಯದ ವೇಳೆ ರವೀಂದ್ರ ಜಡೇಜ ಅವರತ್ತ ಕಿಡಿಗೇಡಿ ಗಳು ಶೂ ಎಸೆದಿದ್ದರು. ಪರಿಸ್ಥಿತಿ ಗಮನಿಸಿರುವ ಬಿಸಿಸಿಐ ಪಂದ್ಯ ಸ್ಥಳಾಂತರಕ್ಕೆ ನಾಲ್ಕು ಮೈದಾನಗಳನ್ನು ಗುರುತಿಸಿ, ಅಂತಿಮ ನಿರ್ಧಾರ ನಿಮ್ಮದು ಎಂದು ಚೆನ್ನೈ ಸೂಪರ್‌ ಕಿಂಗ್‌ ಮಾಲಕರಿಗೆ ತಿಳಿಸಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣ, ಮಹಾರಾಷ್ಟ್ರದ ಪುಣೆ, ಗುಜರಾತ್‌ನ ರಾಜ್‌ಕೋಟ್‌, ಕೇರಳದ ತಿರುವನಂತ ಪುರದಲ್ಲಿ ಸ್ಥಳೀಯ ಪಂದ್ಯಗಳನ್ನು ಆಡಿಸಲು ಹೋಮ್‌ ಗ್ರೌಂಡ್‌ ಆಗಿ ಆಯ್ದುಕೊಳ್ಳಲು ಬಿಸಿಸಿಐ ತಿಳಿಸಿದೆ. ಈ ಪೈಕಿ ವಿಶಾಖಪಟ್ಟಣ ಕುರಿತು ಸಿಎಸ್‌ಕೆ ಆಸಕ್ತಿ ತೋರಿದೆ. 

ಆದರೂ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಪರಿಸ್ಥಿತಿ ಅವಲೋಕಿಸಿ ಪಂದ್ಯ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿ ಎಂದು ಚೆನ್ನೈ ಸೂಪರ್‌ ಕಿಂಗ್ಸ್‌ಗೆ ತಿಳಿಸಿದ್ದೇವೆ’ ಎಂದು ಬಿಸಿಸಿಐ ಆಡಳಿತಾಧಿಕಾರಿ ವಿನೋದ್‌ ರಾಯ್‌ ಹೇಳಿದರು.

ಹಲ್ಲೆಗೆ ರಜನಿಕಾಂತ್‌ ಆಕ್ಷೇಪ: ಐಪಿಎಲ್‌ ಪಂದ್ಯದ ವೇಳೆ ನಡೆದ ಪ್ರತಿಭಟನೆಯಲ್ಲಿ ಮೂವರು ಪೊಲೀಸರ ಮೇಲೆ ದಾಳಿ ನಡೆದಿರುವುದನ್ನು ನಟ ರಜನೀಕಾಂತ್‌ ಆಕ್ಷೇಪಿಸಿದ್ದಾರೆ. ಸಮವಸ್ತ್ರ ಧರಿಸಿದ ವ್ಯಕ್ತಿಯ ಮೇಲೆ ದಾಳಿ ನಡೆಸಿರುವುದು ಹಿಂಸೆಯ ಕ್ರೂರ ರೂಪ ಎಂದು ಟ್ವೀಟ್‌ ಮಾಡಿದ್ದಾರೆ. ರಜನಿಕಾಂತ್‌ ಹೇಳಿಕೆಗೆ ಸಿನಿ ಪ್ರಿಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರೆ, ಆಡಳಿತಾರೂಢ ಎಐಎಡಿಎಂಕೆ ಮುಖಂಡರು ಸ್ವಾಗತಿಸಿದ್ದಾರೆ.

ಪುದುಚೇರಿಯಲ್ಲಿ ಬಂದ್‌: ಕಾವೇರಿ ಜಲ ಮಂಡಳಿ ರಚನೆಗೆ ಆಗ್ರಹಿಸಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಬುಧವಾರ ಬಂದ್‌ ನಡೆಸಲಾಗಿದೆ. ಪಟ್ಟಾಲಿ ಮಕ್ಕಳ್‌ ಕಚ್ಚಿ ಪಕ್ಷ ಬಂದ್‌ ಕರೆ ನೀಡಿತ್ತು. ಇದಕ್ಕೆ ಕಾಂಗ್ರೆಸ್‌ ಕೂಡ ಬೆಂಬಲ ನೀಡಿತ್ತು. ಈ ನಡುವೆ ಜಿಪ್‌ಮರ್‌ ಎಂಬಲ್ಲಿ ರೈಲು ರೋಖೋ ವೇಳೆ ಹೈಟೆನ್ಸ್ನ್‌ ತಂತಿ ತಗುಲಿ ಪ್ರತಿಭಟನಕಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.