ಸ್ವಹಿತಾಸಕ್ತಿ ಸಂಘರ್ಷದಲ್ಲಿ ಸಿಲುಕಿದ್ದಾರಾ ನಾಯಕ ವಿರಾಟ್‌ ಕೊಹ್ಲಿ?


Team Udayavani, Jan 7, 2021, 4:00 PM IST

ಸ್ವಹಿತಾಸಕ್ತಿ ಸಂಘರ್ಷದಲ್ಲಿ ಸಿಲುಕಿದ್ದಾರಾ ನಾಯಕ ವಿರಾಟ್‌ ಕೊಹ್ಲಿ?

ಮುಂಬೈ: ಸ್ವಹಿತಾಸಕ್ತಿ ಪ್ರಕರಣಗಳು ಭಾರತೀಯ ಕ್ರಿಕೆಟ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಬಿರುಗಾಳಿಯೆಬ್ಬಿಸುತ್ತ ಬಂದಿವೆ. ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿಯನ್ನೂ ಇದು ಬಿಟ್ಟಿಲ್ಲ. ಈ ವಿವಾದಕ್ಕೆ ಹೊಸಸೇರ್ಪಡೆ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ.

ಬೆಂಗಳೂರು ಮೂಲದ ಸ್ಟಾರ್ಟಪ್‌ ಗ್ಯಾಲಕ್ಟಸ್‌ ಫ‌ನ್‌ವೇರ್‌ ಟೆಕ್ನಾಲಜಿ ಪ್ರೈವೇಟ್‌ ಲಿ.ನಲ್ಲಿ 2019ರಲ್ಲಿ ಹೂಡಿಕೆ ಮಾಡಿದ್ದಾರೆ. ಆ ಕಂಪನಿಯ ಕ್ರೀಡಾಆ್ಯಪ್‌ “ಮೊಬೈಲ್‌ ಪ್ರೀಮಿಯರ್‌ ಲೀಗ್‌’ನ ಜಾಹೀರಾತಿನಲ್ಲೂ ಕಾಣಿಸಿಕೊಂಡಿದ್ದಾರೆ. ಎಂಪಿಎಲ್‌ ಭಾರತ ಕ್ರಿಕೆಟ್‌ ತಂಡದ ಕಿಟ್‌ ಪ್ರಾಯೋಜಕನಾಗಿರುವುದರಿಂದ ಕೊಹ್ಲಿ ಸ್ವಹಿತಾಸಕ್ತಿ ಸಂಘರ್ಷದ ಸಮಸ್ಯೆ ಎದುರಿಸುತ್ತಿದ್ದಾರೆಂದು ಮೂಲಗಳು ಹೇಳಿವೆ.

ಇಲ್ಲಿ ಇನ್ನೊಂದು ಸಮಸ್ಯೆಯಿದೆ. 2020 ನವೆಂಬರ್‌ನಲ್ಲಿ ಎಂಪಿಎಲ್‌ ಭಾರತ ಕ್ರಿಕೆಟ್‌ ತಂಡದ ಕಿಟ್‌ ಪ್ರಾಯೋಜಕ ಸಂಸ್ಥೆಯಾಗಿ ಆಯ್ಕೆಯಾಗಿದೆ. ಅದೇ ಸಂಸ್ಥೆಗೆ ಕೊಹ್ಲಿ ಜಾಹೀರಾತು ನೀಡುತ್ತಿರುವುದರಿಂದ ಸ್ವಹಿತಾಸಕ್ತಿ ಸಂಘರ್ಷದ ಆರೋಪ ಕೇಳಿಬಂದಿದೆ.

ಮೂಲಗಳು ಹೇಳುವುದೇನು?: ಕೊಹ್ಲಿ 2019 ಫೆಬ್ರವರಿಯಲ್ಲಿ ಹೂಡಿಕೆ ಮಾಡಿದ ಪರಿಣಾಮ, ಅವರು 33.32 ಲಕ್ಷ ರೂ. ಮೌಲ್ಯದ ಡಿಬೆಂಚರ್‌ಗಳನ್ನು ಪಡೆದಿದ್ದಾರೆ. ಇದರ ಪರಿಣಾಮ 10 ವರ್ಷಗಳ ನಂತರ ಕೊಹ್ಲಿ ಕಂಪನಿಯ ಶೇ.0.051 ಷೇರುಗಳನ್ನು ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ:ಸಿಡ್ನಿ ಟೆಸ್ಟ್:  ಪುರುಷರ ಪಂದ್ಯಕ್ಕೆ ವನಿತಾ ಫೋರ್ತ್‌ ಅಂಪಾಯರ್‌!

ಸ್ವಹಿತಾಸಕ್ತಿ ಅನ್ವಯಿಸಲ್ಲ: ಕಾರ್ನರ್‌ ಸ್ಪೋರ್ಟ್ ಸಿಇಒ ಅಮಿತ್‌ ಅರುಣ್‌ ಸಜ್ಡೆ ಪ್ರಕಾರ, ಕೊಹ್ಲಿಗೆ ಯಾವುದೇ ಸ್ವಹಿತಾಸಕ್ತಿ ಸಮ ಸ್ಯೆಯಿಲ್ಲ. ಅವರು ಯಾವ ಕಂಪನಿಯಲ್ಲಿ ಹೂಡಿಕೆ ಮಾಡುವುದಕ್ಕೆ ಬೇಕಾದರೂ ಸ್ವತಂತ್ರರು. ಸಜ್ಡೆ ಲೆಕ್ಕಾಚಾರದಲ್ಲಿ ನೋಡಿದಾಗ ಕೊಹ್ಲಿಗೆ ಹೂಡಿಕೆ ಮಾಡುವುದಕ್ಕೆ ಅಧಿಕಾರವಿದೆ. ಆದರೆ ಸ್ವಹಿತಾಸಕ್ತಿ ನಿಯಮಗಳ ಪ್ರಕಾರ ನೋಡಿದರೆ, ಬಿಸಿಸಿಐ ಕಿಟ್‌ ಪ್ರಾಯೋಜಕ ಕಂಪನಿಗೆ ತಾನೇ ಜಾಹೀರಾತು ನೀಡುವುದು, ಅದರ ಮೂಲ ಕಂಪನಿಯಲ್ಲಿ ಷೇರು ಹೊಂದಿರುವುದು ಸ್ವಹಿತಾಸಕ್ತಿ ಸಂಘರ್ಷವೆನಿಸಿಕೊಳ್ಳುತ್ತದೆ. ಇಲ್ಲಿ ಕೊಹ್ಲಿ ತನ್ನ ಕಂಪನಿಯನ್ನು ಬೆಳೆಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪವೂ ಜೀವ ಪಡೆದುಕೊಳ್ಳುವ ಸಾಧ್ಯತೆಯಿದೆ.

ಗಂಗೂಲಿಗೂ ಸಮಸ್ಯೆ: ಬಿಸಿಸಿಐ ಅಧ್ಯಕ್ಷ ಗಂಗೂಲಿ ಮೈ11ಸರ್ಕಲ್‌ ಬೆಟ್ಟಿಂಗ್‌ ಆ್ಯಪ್‌ಗೆ ಜಾಹೀರಾತುದಾರ. ಇನ್ನೊಂದುಕಡೆ ಡ್ರೀಮ್‌11 ಆ್ಯಪ್‌ ಐಪಿಎಲ್‌ಗೆ ಶೀರ್ಷಿಕೆ ಪ್ರಾಯೋಜಕ! ಇದು ಸ್ವಹಿತಾಸಕ್ತಿ ಎಂಬ ಆರೋಪಗಳು ಕೇಳಿಬಂದಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.