“ವಿಶ್ವಕಪ್‌ನಲ್ಲಿ ಒತ್ತಡ ನಿಭಾಯಿಸುವುದು ಮುಖ್ಯ’

Team Udayavani, Jan 24, 2020, 12:55 AM IST

ಮುಂಬಯಿ: ಆಸ್ಟ್ರೇಲಿಯ ದಲ್ಲಿ ನಡೆಯಲಿರುವ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಒತ್ತಡವನ್ನು ನಿಭಾಯಿಸುವಲ್ಲಿ ಯಶಸ್ವಿ ಯಾಗುವುದು ಮುಖ್ಯ ಎಂಬುದಾಗಿ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಹೇಳಿದ್ದಾರೆ. ಗುರುವಾರ ಆಸ್ಟ್ರೇಲಿಯಕ್ಕೆ ಹೊರಡುವ ಮುನ್ನ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

“ಕಳೆದೆರಡು ವಿಶ್ವಕಪ್‌ಗ್ಳಲ್ಲಿ ನಮ್ಮ ಪ್ರದರ್ಶನ ಉತ್ತಮ ಮಟ್ಟದಲ್ಲಿತ್ತು. ಆದರೆ ಒತ್ತಡವನ್ನು ನಿಭಾಯಿಸುವಲ್ಲಿ ವಿಫ‌ಲರಾದೆವು. ಈ ಬಾರಿ ಇಂಥ ಸಂಕಟ ಮರುಕಳಿಸಬಾರದು’ ಎಂದು ಕೌರ್‌ ಹೇಳಿದರು. ಕಳೆದ ಸಲ ಸೆಮಿಫೈನಲ್‌ನಲ್ಲಿ ಸೋತ ಭಾರತ, ಇದಕ್ಕೂ ಹಿಂದಿನ ವಿಶ್ವಕಪ್‌ನಲ್ಲಿ ರನ್ನರ್‌ ಅಪ್‌ ಆಗಿತ್ತು.

ಫೆಬ್ರವರಿ 21ರಿಂದ ಮಾರ್ಚ್‌ 8ರ ತನಕ ನಡೆಯಲಿರುವ ವಿಶ್ವಕಪ್‌ ಪಂದ್ಯಾವಳಿಗೂ ಮುನ್ನ ಭಾರತ ತಂಡ ಆತಿಥೇಯ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ತಂಡಗಳನ್ನೊಳಗೊಂಡ ತ್ರಿಕೋನ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಗ್ರೂಪ್‌ ಹಂತದಲ್ಲಿ ಭಾರತ ತಂಡ ಆಸ್ಟ್ರೇಲಿಯ, ಬಾಂಗ್ಲಾದೇಶ, ಕಿವೀಸ್‌, ಲಂಕಾ ಸವಾಲನ್ನು ಎದುರಿಸಲಿದೆ.

ಕಳೆದೆರಡು ವಿಶ್ವಕಪ್‌ಗ್ಳಲ್ಲಿ ನಮ್ಮ ಪ್ರದರ್ಶನ ಉತ್ತಮ ಮಟ್ಟದಲ್ಲಿತ್ತು. ಆದರೆ ಒತ್ತಡವನ್ನು ನಿಭಾಯಿಸುವಲ್ಲಿ ವಿಫ‌ಲರಾದೆವು. ಈ ಬಾರಿ ಇಂಥ ಸಂಕಟ ಮರುಕಳಿಸಬಾರದು.
-ಹರ್ಮನ್‌ಪ್ರೀತ್‌ ಕೌರ್‌

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

  • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....