ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 1,000 ವಿಕೆಟ್ ಪಡೆದ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್
Team Udayavani, Jul 6, 2021, 12:20 PM IST
ಲಂಡನ್: ಇಂಗ್ಲೆಂಡ್ ನ ಖ್ಯಾತ ವೇಗಿ ಜೇಮ್ಸ್ ಆ್ಯಂಡರ್ಸನ್ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಒಂದು ಸಾವಿರ ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ಕೌಂಟಿ ಕ್ರಿಕೆಟ್ ನಲ್ಲಿ ಲ್ಯಾಂಕ್ ಶೈರ್ ತಂಡದ ಪರವಾಗಿ ಆಡುತ್ತಿರುವ ಜಿಮ್ಮಿ ಕೆಂಟ್ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದರು.
ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆ್ಯಂಡರ್ಸನ್ ಏಳು ವಿಕೆಟ್ ಕಿತ್ತರು. ಅಷ್ಟೇ ಅಲ್ಲದೆ ತನ್ನ ಜೀವನ ಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದ ಅವರು ಕೇವಲ 19 ರನ್ ನೀಡಿ ಏಳು ವಿಕೆಟ್ ಪಡೆದರು. ಕೆಂಟ್ ತಂಡ ಕೇವಲ 74 ರನ್ ಗೆ ಆಲೌಟ್ ಆಯಿತು.
ಸದ್ಯ ಜೇಮ್ಸ್ ಆ್ಯಂಡರ್ಸನ್ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 1002 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇತ್ತೀಚೆಗಷ್ಟೇ ಇಂಗ್ಲೆಂಡ್ ಪರ ಅತೀ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿಆಡಿದ ಸಾಧನೆಯನ್ನು ಆ್ಯಂಡರ್ಸನ್ ಮಾಡಿದ್ದರು. 161 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದ ಮಾಜಿ ನಾಯಕ ಅಲಿಸ್ಟರ್ ಕುಕ್ ದಾಖಲೆಯನ್ನು ಆ್ಯಂಡರ್ಸನ್ ಕಳೆದ ತಿಂಗಳು ಅಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ