ಏಕದಿನ ತಂಡಕ್ಕೆ ಮರಳಿದ ಜಾಸನ್ ರಾಯ್
Team Udayavani, Sep 9, 2020, 6:42 PM IST
ಲಂಡನ್: ಫಿಟ್ನೆಸ್ನಲ್ಲಿ ತೇರ್ಗಡೆಯಾದ ಇಂಗ್ಲೆಂಡಿನ ಆರಂಭಕಾರ ಜಾಸನ್ ರಾಯ್ ಏಕದಿನ ತಂಡಕ್ಕೆ ಮರಳಿದ್ದಾರೆ. ಪ್ರವಾಸಿ ಆಸ್ಟ್ರೇಲಿಯ ಎದುರಿನ 3 ಪಂದ್ಯಗಳ ಸರಣಿಗಾಗಿ ರಾಯ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಟಿ20 ಸರಣಿಯಲ್ಲಿ ಮಿಂಚಿ, ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಡೇವಿಡ್ ಮಾಲನ್ ಮೀಸಲು ಕ್ರಿಕೆಟಿಗನಾಗಿದ್ದಾರೆ. ಈ ಯಾದಿಯಲ್ಲಿರುವ ಉಳಿದಿಬ್ಬರು ಆಟಗಾರರೆಂದರೆ ಫಿಲ್ ಸಾಲ್ಟ್ ಮತ್ತು ಶಕೀಬ್ ಮಹಮೂದ್. ಶುಕ್ರವಾರದಿಂದ ಏಕದಿನ ಸರಣಿ ಆರಂಭವಾಗಲಿದ್ದು, ಎಲ್ಲ ಪಂದ್ಯಗಳು ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಅಂಗಳದಲ್ಲಿ ನಡೆಯಲಿವೆ.
ಇಂಗ್ಲೆಂಡ್ ತಂಡ: ಇಯಾನ್ ಮಾರ್ಗನ್ (ನಾಯಕ), ಮೊಯಿನ್ ಅಲಿ, ಜೋಫ್ರ ಆರ್ಚರ್, ಜಾನಿ ಬೇರ್ಸ್ಟೊ, ಟಾಮ್ ಬ್ಯಾಂಟನ್, ಸ್ಯಾಮ್ ಬಿಲ್ಲಿಂಗ್ಸ್, ಜಾಸ್ ಬಟ್ಲರ್, ಸ್ಯಾಮ್ ಕರನ್, ಟಾಮ್ ಕರನ್, ಆದಿಲ್ ರಶೀದ್, ಜೋ ರೂಟ್, ಜಾಸನ್ ರಾಯ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್