ಸಂಜನಾ ಗಣೇಶನ್ ಕೈ ಹಿಡಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ
Team Udayavani, Mar 15, 2021, 3:58 PM IST
ಪಣಜಿ: ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಜೊತೆ ಜಸ್ಪ್ರೀತ್ ಬುಮ್ರಾ ಇಂದು ವಿವಾಹವಾದರು.
ಗೋವಾದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಎರಡು ಕುಟುಂಬಗಳ ಆಪ್ತರಷ್ಟೇ ಭಾಗವಹಿಸಿದ್ದರು.
ಇದನ್ನೂ ಓದಿ:ಮತ್ತೆ ಲಯಕ್ಕೆ ಮರಳಿದ ವಿರಾಟ್: ಒಂದು ಪಂದ್ಯ- ಹಲವು ದಾಖಲೆಗಳು
ಈ ಬಗ್ಗೆ ಟ್ವೀಟ್ ಮಾಡಿರುವ ಜಸ್ಪ್ರೀತ್, ತಮ್ಮ ವಿವಾಹದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಪ್ರೀತಿಯಿಂದ ಪ್ರೇರಿತವಾದ ನಾವು ಒಟ್ಟಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಇಂದು ನಮ್ಮ ಜೀವನದ ಅತ್ಯಂತ ಸಂತೋಷದಾಯಕ ದಿನಗಳಲ್ಲಿ ಒಂದಾಗಿದೆ ಮತ್ತು ನಮ್ಮ ವಿವಾಹದ ಸುದ್ದಿ ಮತ್ತು ನಮ್ಮ ಸಂತೋಷವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ ಎಂದು ಬರೆದುಕೊಂಡಿದ್ದಾರೆ.
ವಿವಾಹ ಸಮಾರಂಭಕ್ಕೆ ಕೇವಲ 20 ಜನರಿಗೆ ಮಾತ್ರ ಆಹ್ವಾನಿಸಲಾಗಿತ್ತು. ರವಿವಾರ ಮತ್ತು ಸೋಮವಾರ ಕಾರ್ಯಕ್ರಮಗಳು ನಡೆದಿದ್ದು, ಆಹ್ವಾನಿತರಿಗೆ ಮೊಬೈಲ್ ಬಳಸಲು ಕೂಡಾ ಅವಕಾಶ ನಿರಾಕರಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.
28 ವರ್ಷದ ಸಂಜನಾ ಗಣೇಶನ್ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಕ್ರೀಡಾ ನಿರೂಪಕಿಯಾಗಿ ಪ್ರಸಿದ್ದರಾಗಿದ್ದಾರೆ. ಮಹಾರಾಷ್ಟ್ರದವರಾದ ಸಂಜನಾ 2014ರ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ತಲುಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ