ರೋಹಿತ್ ಶರ್ಮಾ ಗಾಯಾಳು: ಟೆಸ್ಟ್ ಉಪನಾಯಕ ಸ್ಥಾನಕ್ಕೆ ಕೆ.ಎಲ್.ರಾಹುಲ್ ನೇಮಕ
Team Udayavani, Dec 18, 2021, 3:11 PM IST
ಮುಂಬೈ: ಅಭ್ಯಾಸದ ವೇಳೆ ಗಾಯಗೊಂಡಿರುವ ರೋಹಿತ್ ಶರ್ಮಾ ಬದಲಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ತಂಡದ ಉಪ ನಾಯಕನಾಗಿ ಕೆ.ಎಲ್.ರಾಹುಲ್ ಅವರನ್ನು ನೇಮಿಸಲಾಗಿದೆ ಎಂದು ಎಎನ್ಐ ವರದಿ ತಿಳಿಸಿದೆ.
ಮಂಡಿರಜ್ಜು ಗಾಯದಿಂದಾಗಿ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಪ್ರಿಯಾಂಕ್ ಪಾಂಚಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಇದೇ ಮೊದಲ ಬಾರಿಗೆ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ಉಪ ನಾಯಕರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಗಾಯಗೊಂಡ ಕಾರಣ ಅವರ ಸ್ಥಾನಕ್ಕೆ ಕೆ.ಎಲ್.ರಾಹುಲ್ ನೇಮಕವಾಗಿದ್ದಾರೆ. ಆದರೆ ರಾಹುಲ್ ಅವರು ಈ ಸರಣಿಗೆ ಮಾತ್ರವೇ ಉಪ ನಾಯಕರಾಗಿರುತ್ತಾರೆ.
ಇದನ್ನೂ ಓದಿ:ಭಾರತ ಕ್ರಿಕೆಟ್ ನಲ್ಲಿ ತೆಂಡುಲ್ಕರ್ ಗೆ ಮುಖ್ಯ ಸ್ಥಾನ?: ಗಂಗೂಲಿ ಸುಳಿವು
ಡಿ.26ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮೂರು ಟೆಸ್ಟ್ ಪಂದ್ಯಗಳ ಬಳಿಕ ಮೂರು ಏಕದಿನ ಪಂದ್ಯಗಳ ಸರಣಿ ಜ.19ರಿಂದ ಆರಂಭವಾಗಲಿದೆ.
ತಂಡ: ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿ.ಕೀ), ವೃದ್ಧಿಮಾನ್ ಸಹಾ (ವಿ.ಕೀ), ಪ್ರಿಯಾಂಕ್ ಪಾಂಚಾಲ್, ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.